ಬ್ರಹ್ಮ ಕಮಲ ಚಿತ್ರದ ಪೋಸ್ಟರ್ ಬಿಡುಗಡೆ

 “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರಕ್ಕೆ ಹಲವು ಪ್ರಶಸ್ತಿ ಪಡೆದು ಗಮನ ಸೆಳೆದ  ನಿರ್ದೇಶಕ “ಸಿದ್ದು ಪೂರ್ಣಚಂದ್ರ”   ನಿರ್ದೇಶಿಸುತ್ತಿರುವ  “ಬ್ರಹ್ಮಕಮಲ” ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.

ಬ್ರಹ್ಮಕಮಲ” ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಧ್ವಿತಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.  ಸಿದ್ದು ಪೂರ್ಣಚಂದ್ರ ಅವರೇ ಚಿತ್ರ ನಿರ್ಮಾಣ ಕೂಡ ಮಾಡಿದ್ದಾರೆ.

ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ. ಈಗಾಗಲೇ ಚಿತ್ರೀಕರಣ ಮುಗಿಸಿ ಸೆನ್ಸಾರ್ ಮಂಡಳಿಯಿಂದ “ಯು” ಸರ್ಟಿಫಿಕೇಟ್ ಪಡೆದುಕೊಂಡಿದೆ.

”  ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್,ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದಸ್ವಾಮಿ, ಕವಿತಾ ಕಂಬಾರ್, ರಾಧಾ ರಾಮಚಂದ್ರ ಇನ್ನೂ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಛಾಯಾಗ್ರಹಣ ಲೋಕೇಂದ್ರ ಸೂರ್ಯನಾರಾಯಣ,  ಸಂಕಲನ ದೀಪು ಸಿ ಎಸ್, ಸಂಗೀತ ಅನಂತ್ ಆರ್ಯನ್ ಹೊಣೆ ಹೊತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರು ಎ.ಕೆ. ಪುಟ್ಟರಾಜು ಮತ್ತು ಪ್ರಮಿಳಾ ಸುಬ್ರಹ್ಮಣ್ಯಂ ಕೈಜೋಡಿದ್ದಾರೆ.