ಬ್ರಿಜ್ ಭೂಷಣ್‍ಸಿಂಗ್ ಬಂಧಿಸುವಂತೆ ಮನವಿ

ವಿಜಯಪುರ : ಮೇ.19: ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳ ಪ್ರತಿಭಟನೆ ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್‍ಸಿಂಗ್ ಬಂಧನಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಾದ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಿಂದ ಮನವಿ ಸಲ್ಲಿಸಲಾಯಿತು.
ಈಸಂದರ್ಭದಲ್ಲಿ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷರಾದ ಭಾರತಿ ವಾಲಿ ಮಾತನಾಡಿ, ಒಲಂಪಿಕ್ ಪದಕ ವಿಜೇತರು ವಿಶ್ವ ಚಾಂಪಿಯನ್ ಕುಸ್ತಿಪಟುಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು 2023 ಏಪ್ರಿಲ್ 24 ರಿಂದ ನವದೆಹಲಿಯ ಜಂತರ್ ಮಂತರ್‍ನಲ್ಲಿ ಅನಿರ್ಧಿಷ್ಠಾವಧಿ ಪ್ರತಿಭಟನೆ ನಡೆಸುತ್ತಿದ್ದು,
ಪೆÇಲೀಸ ಅಧಿಕಾರಿಗಳಿಗೆ ದೂರು ನೀಡಿದ್ದರೂ ಎಫ್ ಐ ಆರ್ ದಾಖಲಾಗಿರಲಿಲ್ಲ, ಸುಪ್ರೀಂ ಕೋರ್ಟ್‍ನ ಮಧ್ಯಪ್ರವೇಶದ ನಂತರವಷ್ಟೇ ಎಫ್ ಐ ಆರ್ ದಾಖಲಾಗಿದೆ. ಈ ಪ್ರತಿಭಟನಾ ಕುಸ್ತಿಪಟುಗಳು ತಮ್ಮ ಮೇಲಾಗಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಮಾತ್ರ ಕೇಳುತ್ತಿದ್ದಾರೆ ಹಾಗೂ ಕುಸ್ತಿಪಟುಗಳ ಆರೋಪದ ಹಿನ್ನೆಲೆಯಲ್ಲಿ ರಚಿಸಲಾದ ವಿಚಾರಣಾ ಸಮಿತಿಯ ವರದಿಯನ್ನು ಸಾರ್ವಜನಿಕರ ಅವಗಾಹನೆಗೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು, ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ಅತ್ಯಂತ ಆಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಯದರ್ಶಿ ಅನಸೋಯಾ ಹಜೇರಿ ಮಾತನಾಡಿ, ಭೇಟಿ ಬಚಾವೋ, ಭೇಟಿ ಪಡಾವೋ” ಎಂದು ಪುಚಾರ ಮಾಡುವ ಮೋದಿ ನೇತ್ರತ್ವದ ಒಕ್ಕೂಟ ಸರ್ಕಾರ ಹೀನ ಅಪರಾಧದ ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ದೂರಿನ ಆಧಾರದಲ್ಲಿ ಕಾನೂನು ಕ್ರಮ ಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದೆ ಬಿಜೆಪಿ ನೇತೃತ್ವದ ಸರ್ಕಾರ ತನ್ನ ಪೆÇಲೀಸ್ ಪಡೆಗಳನ್ನು ಬಳಸಿ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ ಮೊನ್ನೆಯಷ್ಟೇ ದಹಲಿ ಪೆÇಲೀಸರು ಕುಡಿದು ಬಂದು ಪ್ರತಿಭಟನಾಕಾರರ ಮೇಲೆ ದೌರ್ಜನ ನಡೆಸಿದ್ದಾರೆ. ಇವೆಲ್ಲಾ ಕಿರುಕುಳಗಳ ಮಧ್ಯೆಯೂ ನ್ಯಾಯ ಸಿಗುವತನಕ ಹೋರಾಟ ನಿಲ್ಲಿಸುವುದಿಲ್ಲ ಎಂದು ವುತಿಭಟಿಸುತ್ತಿರುವುದು ಅತ್ಯಂತ ಪ್ರಶಂಸನೀಯ ಹಾಗೂ ಅಭಿನಂದನಾರ್ಹವಾಗಿದೆ ಎಂದರು.
ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೂನಗಾಣಬೇಕು ಇದಕ್ಕಾಗಿ ದೇಶದ ಎಲ್ಲಾ ನಾಗರಿಕರು ಈ ಪ್ರತಿಭಟನೆಯನ್ನು ಬೆಂಬಲಿಸಬೇಕು ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆ ಇನ್ನು ಕಿರುಕುಳ ಆದರೆ ಇನ್ನೂ ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಕೇಳುವುದು ಹೇಗೆ ಎಂಬ ಪ್ರಶ್ನೆ ಯನ್ನು ನಾವೆಲ್ಲರೂ ಹಾಕಿಕೊಳ್ಳಬೇಕಾಗುತ್ತದೆ. ದೇಶಕ್ಕೆ ಕೀರ್ತಿ ತರುವ ಸಾಮಾಥ್ರ್ಯ ದ ಕ್ರೀಡಾಪಟುಗಳ ಆತ ಸೈರ್ಯ ಕುಂದಿಸುವ ಕೆಲಸವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕು . ಈ ಕೂಡಲೇ ಫೆÇೀಸ್ಕೋ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿ ಬಿಜೆಪಿ ಸಂಸದ ಬಿಜ್ ಭೂಷಣ್ ಸಿಂಗ್ ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳ ಮೇಲೆ ಕಠಿಣ ಶಿಕ್ಷೆ ವಿಧೀಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸೋನುಬಾಯಿ ಬ್ಯಾಳಿ, ಸುಮಿತ್ರ ಗೊಣಸಗಿ, ಗಂಗುಬಾಯಿ ಸಿಂದಗಿ, ಸಂಗೀತಾ ಜೋಗೆನ್ನವರ, ಮಂಜುಳಾ ಹಜೇರಿ, ರಾಜಮಾ ನದಾಫ, ಸಾಹೇಬಿ ಶೇಖ್, ಶಾರದಾ ತಾಂಬೆ ಮುಂತಾದವರು ಇದ್ದರು.