ಬ್ರಿಜ್ ಭೂಷಣ ವಜಾಕ್ಕೆ ಆಗ್ರಹ

ಶಹಾಬಾದ,ಮೇ.5-ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಡಬ್ಲ್ಯೂಎಫ್‍ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‍ಓ ತಾಲ್ಲೂಕ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು, ಮಹಿಳೆಯರಿಗೆ ಸೂಕ್ತ ಭದ್ರತೆಯನ್ನು ಖಾತ್ರಿ ಪಡಿಸಲು ಸರ್ಕಾರ ಮತ್ತು ಪೊಲೀಸ್ ಆಡಳಿತವು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ತಾಲ್ಲೂಕ ಕಾರ್ಯದರ್ಶಿ ಅಜಯ್ ಎ.ಜಿ.ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.