ಬ್ರಿಟನ್‌ನಲ್ಲಿ ಆರು ವಾರ ಲಾಕ್‌ಡೌನ್

ಲಂಡನ್, ಜ. ೫- ರೂಪಾಂತರಿ ಕೊರೊನಾ ಉಪಟಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್‌ನಲ್ಲಿ ಇಂದಿನಿಂದ ಮತ್ತೆ ಆರು ವಾರಗಳ ಕಾಲ ಲಾಕ್‌ಡೌನ್ ಘೋಷಿಸಿದೆ.
ರೂಪಾಂತರಿ ಕೊರೊನಾ ಬ್ರಿಟನ್‌ನಲ್ಲಿ ದಿನದಿಂದ ದಿನಕ್ಕೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸಲು ಪ್ರಧಾನಿ ಮುಂದಾಗಿದ್ದಾರೆ.
ಇದರಿಂದಾಗಿ ಬ್ರಿಟನ್ನಿನ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳು ಇರುವುದಿಲ್ಲ ಎಂದು ತಜ್ಞರು ಎಚ್ಚರಿಕೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ರೂಪಾಂತರಿ ಸೋಂಕು ವೇಗವಾಗಿ ಹರಡುವುದನ್ನು ತಡೆಯಲು ಬ್ರಿಟನ್ ಸರ್ಕಾರ ಕಠಿಣ ನಿಲುವನ್ನು ಪ್ರಧಾನಿಯವರು ತೆಗೆದುಕೊಂಡಿದ್ದಾರೆ.
ಬ್ರಿಟನ್‌ಗೆ- ವಿಮಾನ ಸಂಚಾರ ಪುನರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ರೂಪಾಂತರಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಪುನರ್ ಪರಿಶೀಲನೆ ನಡೆಸಲಿ ಎಂಬ ಮಾತುಗಳು ಕೇಳಿಬರುತ್ತಿವೆ.
ನಾಳೆಯಿಂದಲೇ ಲಾಕ್ ಡೌನ್ ಜಾರಿಗೆ ಬರಲಿದ್ದು ಫೆಬ್ರವರಿ ಮಧ್ಯಂತರ ವೇಳೆ ವರೆಗೂ ಮುಂದುವರಿಸುವ ಸಾಧ್ಯತೆಗಳಿವೆಯೆಂದು ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ನಿನ್ನೆ ಹೇಳಿದ್ದಾರೆ.
ಬ್ರಿಟನ್ ನಲ್ಲಿರುವ ಸುಮಾರು ೫೬ ದಶಲಕ್ಷ ಜನರು ಮತ್ತೊಮ್ಮೆ ಲಾಕ್ಡೌನ್ ನಿರ್ಬಂಧಗಳನ್ನು ಎದುರಿಸಬೇಕಾಗಿದೆ. ನಿನ್ನೆ ರಾತ್ರಿ ಪ್ರಧಾನಿಯವರು ಟೆಲಿವಿಷನ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣ ಸಂದರ್ಭದಲ್ಲಿ ಈ ವಿಷಯವನ್ನು ಪ್ರಕಟಿಸಿದರು.
ಇಂದು ಮಧ್ಯರಾತ್ರಿಯಿಂದಲೇ ಲಾಕ್ಡೌನ್ ಜಾರಿಗೆ ಬರಲಿದೆ. ಇದೇ ರೀತಿಯ ನಿರ್ಬಂಧಗಳನ್ನು ಸ್ಕಾಟ್ಲ್ಯಾಂಡ್ ಪ್ರಕಟಿಸಿದ ನಂತರ ಬ್ರಿಟನ್ನಲ್ಲಿ ಮತ್ತೊಮ್ಮೆ ಲಾಕ್ ಡೌನ್ ನಿಯಮಗಳು ಜಾರಿಗೆ ಬರಲಿವೆ.
ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಸೇರಿದಂತೆ ಎಲ್ಲ ರೀತಿಯ ಚಟುವಟಿಕೆಗಳನ್ನು ಬಂದ್ ಇಡೀ ವಿಶ್ವದಲ್ಲೇ ಕೋವಿಡ್ ಸಾಂಕ್ರಾಮಿಕ ದಿಂದ ಅತಿ ಹೆಚ್ಚು ಜನರು ಬ್ರಿಟನ್ನಲ್ಲಿ ಮೃತಪಟ್ಟಿದ್ದಾರೆ.
ಈ ದೇಶದಲ್ಲಿ ಸುಮಾರು ೪೪ ದಶಲಕ್ಷ ಜನರು ಅಥವಾ ಇಂಗ್ಲೆಂಡ್ ಮೂರನೇ ಭಾಗದಷ್ಟು ಜನರು ಈಗಾಗಲೇ ಅತ್ಯಂತ ಕಠಿಣ ನಿರ್ಬಂಧಗಳ ನಡುವೆ ಜೀವನ ಸಾಗಿಸುತ್ತಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ರೂಪಾಂತರಿ ಕೊರೊನಾ ಸೋಂಕು ಘಟನೆ ಜನರನ್ನು ಅಧಿಕ ಪ್ರಮಾಣದಲ್ಲಿ ಬಾಧಿಸುತ್ತಿದೆ. ಬೋರಿಸ್ ಜಾನ್ಸನ್ ಅವರ ಪ್ರಕಾರವೇ ದೇಶದಲ್ಲಿ ೨೭ ಸಾವಿರಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ.
ಇವರೆಲ್ಲರಿಗೂ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ವರ್ಷದ ಏಪ್ರಿಲ್ ತಿಂಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡ ನಂತರ ದೇಶದಲ್ಲಿ ಶೇಕಡ ೪೦ ರಷ್ಟು ಜನರು ಸೋಂಕಿನಿಂದ ಬಳಲುತ್ತಿದ್ದಾರೆ. ಕಳೆದ ಮಂಗಳವಾರ ಒಂದೇ ದಿನದಲ್ಲಿ ೮೦ ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ಇರುವುದು ಪತ್ತೆಯಾಗಿತ್ತು..
ಸೋಂಕು ನಿಗ್ರಹಕ್ಕೆ ಸರ್ಕಾರ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇನ್ನೂ ಹಲವು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ರೂಪಾಂತರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿ ಅಗತ್ಯ ಎಂದು ಪ್ರಧಾನಿ ಹೇಳಿದ್ದಾರೆ.