ಬ್ರಿಟನ್‌ಲ್ಲಿಎರಡು ವಾರ ಶಾಲೆ ಬಂದ್

ಲಂಡನ್,ಜ.೩- ಇಂಗ್ಲೆಂಡ್ ನಲ್ಲಿ ದಾಖಲೆಯ ಪ್ರಮಾಣದಲ್ಲಿ ಒಂದೇ ದಿನ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ವಾರ ಶಾಲೆಗಳನ್ನು ಮುಚ್ಚಲು ಅಲ್ಲಿನ ಸರ್ಕಾರ ಆದೇಶಿಸಿದೆ.

ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಎರಡು ವಾರಗಳ ಕಾಲ ಇಂಗ್ಲೆಂಡಿನಾದ್ಯಂತ ಶಾಲೆಗಳನ್ನು ಮುಚ್ಚುವಂತೆ ಸರ್ಕಾರ ಸೂಚನೆ ನೀಡಿದೆ.

ಕೊರೋನಾ ಸೋಂಕು ಜೊತೆಗೆ ರೂಪಾಂತರ ಸೋಂಕು ಕಾಣಿಸಿಕೊಂಡಿರುವುದು ಇಂಗ್ಲೆಂಡ್ ಜನರನ್ನು ಮತ್ತಷ್ಟು ಆತಂಕಕ್ಕೆ ಗುರಿಮಾಡಿದೆ ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಇಂಗ್ಲೆಂಡ್‌ನಲ್ಲಿ ಕಳೆದ ೨೪ ಗಂಟೆಗಳಲ್ಲಿ ೫೭,೭೨೫ ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರದಿಂದ ಈಚೆಗೆ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ ಇದುವರೆಗೂ ಇಂಗ್ಲೆಂಡ್ನಲ್ಲಿ ೭೫ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ರೂಪಾಂತರ ಕರೋನವನ್ನು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕನಿಷ್ಠ ಎರಡು ವಾರಗಳ ಕಾಲ ಶಾಲೆಗಳನ್ನು ರಜೆ ನೀಡುವಂತೆ ಸರ್ಕಾರ ಸೂಚಿಸಿದ್ದು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ನಿರ್ದೇಶನ ನೀಡಿದೆ.

ಇಂಗ್ಲೆಂಡ್ ನಲ್ಲಿ ಕಳೆದ ಒಂದು ವಾರದಿಂದ ಸರಾಸರಿ ಪ್ರತಿದಿನ ೫೦ ಸಾವಿರದಂತೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಅಲ್ಲಿನ ರಾಷ್ಟ್ರೀಯ ಆರೋಗ್ಯ ಇಲಾಖೆ ತಿಳಿಸಿದೆ.

ಇಂಗ್ಲೆಂಡ್‌ನಲ್ಲಿ ೪,೫೦,೦೦೦ಕ್ಕೂ ಹೆಚ್ಚು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಅವರ ಆರೋಗ್ಯ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎರಡು ವಾರಗಳ ಕಾಲ ಶಾಲೆಗೆ ರಜೆ ನೀಡಲಾಗಿದೆ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.

ಅಸುರಕ್ಷಿತ ವಾತಾವರಣದಲ್ಲಿ ಶಾಲೆಗಳಿಗೆ ಹೋಗದೇ ಇರುವುದು ನಮ್ಮ ಹಕ್ಕು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಪರಿಸ್ ಇರುವುದಾಗಿ ರಾಷ್ಟ್ರೀಯ ಶಿಕ್ಷಣ ಯೂನಿಯನ್ನ ಜಂಟಿ ಪ್ರಧಾನ ಕಾರ್ಯದರ್ಶಿ ಕೆವಿನ್ ಕೌಂಟೆ ಹೇಳಿದ್ದಾರೆ

ದಿನೇದಿನೇ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳನ್ನು ಕಾಯ್ದಿರಿಸುವಂತೆ ಆಸೆ ಆಸ್ಪತ್ರೆಗಳಿಗೂ ಪ್ರಧಾನಿ ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಹೊಸ ತಲೆಮಾರಿನ ಸೋಂಕು ಇಂಗ್ಲೆಂಡ್ನಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಜನ ಸಹಜವಾಗಿಯೇ ಆತಂಕಕ್ಕೆ ಸಿಲುಕಿದ್ದಾರೆ ಜೊತೆಗೆ ಅಲ್ಲಿ ಕಾಣಿಸಿಕೊಂಡ ಸೋಂಕು ಇಡೀ ವಿಶ್ವದ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದೆ