ಬ್ರಿಮ್ಸ್ ಅವ್ಯವಸ್ಥೆ ಕಂಡು ಡಾ.ಕೆ.ಸುಧಾಕರ್ ತೀವ್ರ ಬೇಸರ

ಬೀದರ: ಮೇ.1:ನಗರದ ಬ್ರಿಮ್ಸ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ದೂರುಗಳು ಇರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ ಅವರು ಏಪ್ರೀಲ್ 30ರಂದು ಬ್ರಿಮ್ಸ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ವಿವಿಧ ವಾರ್ಡಗಳಲ್ಲಿ ಸಂಚರಿಸುವಾಗ ಅಲ್ಲಿನ ಅವ್ಯವಸ್ಥೆ ಕಂಡು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ವಾರ್ಡ್ ಮತ್ತು ಐಸಿಯುಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಪಿಪಿಇ ಕಿಟ್ ನೀಡದ್ದನ್ನು ಕಂಡು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಉತ್ತಮ ಗುಣಮಟ್ಟದ ವಸ್ತುಗಳನ್ನು ಕಳುಹಿಸಿದ್ದರೂ ನೀಡದ್ದಕ್ಕೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಜಿಲ್ಲಾ ಪಂಚಾಯತ್ ಸಿಇಓ ಜಹೀರಾ ನಸೀಂ ಅವರಿಗೆ ಸೂಚನೆ ನೀಡಿದರು.
ಸಿಟಿಸ್ಕ್ಯಾನರ್ ಕೆಲಸ ಮಾಡದ್ದನ್ನೂ ತಿಳಿದ ಸಚಿವರು, ಸಂಜೆ ವೇಳೆಗೆ ಅದನ್ನು ಸುಸ್ಥಿತಿಗೆ ತರಬೇಕು. ಹೆಚ್ಚುವರಿಯಾಗಿ ಮತ್ತೊಂದು ಸಿಟಿಸ್ಕ್ಯಾನರ್ ಖರೀದಿಸಲು ಸ್ಥಳದಲ್ಲೇ ಆದೇಶ ನೀಡಿದರು.
ಈ ಸಂದರ್ಭದಲ್ಲಿ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್, ಸಂಸದರಾದ ಭಗವಂತ ಖೂಬಾ, ಶಾಸಕರಾದ ಬಂಡೆಪ್ಪ ಖಾಶೆಂಪೂರ, ರಹೀಂ ಖಾನ್, ಬ್ರಿಮ್ಸ್ ನಿರ್ದೇಶಕರಾದ ಡಾ.ಶಿವಕುಮಾರ ಸಿ ಹಾಗೂ ಇನ್ನೀತರು ಇದ್ದರು.