
(ಸಂಜೆವಾಣಿ ವಾರ್ತೆ)
ಬಳ್ಳಾರಿ: ನಗರದ ಬ್ರೂಸ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಕೆ.ಶ್ರೀನಿವಾಸಲು ಅವರನ್ನು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೇಮಕಮಾಡಿ ಆದೇಶಿಸಿದ್ದಾರೆ.
ತಕ್ಷಣ ಈ ಜವಾಬ್ದಾರಿ ವಹಿಸಿಕೊಂಡು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾ್ಗದರ್ಶನದಲ್ಲಿ, ಸ್ಥಳೀಯ ನಾಯಕರ ಸಹಯೋಗದೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಸೆಕ್ರೆಟರಿ ಶ್ರೀಧರ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜೆ.ಎಸ್. ಆಂಜನೇಯಲು, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರ ಸಹಕಾರದೊಂದಿಗೆ ಈ ಜವಾಬ್ದಾರಿವಹಿಸಿಕೊಂಡು. ಪ್ರಸಕ್ತ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ಶ್ರೀನಿವಾಸಲು ಹೇಳಿದ್ದಾರೆ