
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಆ.05: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಜಾರಿ ಎಂಟು ಜನ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಸಿಂಧನೂರಿನಿಂದ ಸಿರುಗುಪ್ಪ ಮೂಲಕ ಬಳ್ಳಾರಿಗೆ ಬರುತ್ತಿದ್ದ ಕೆ.ಎ.34 ಎಫ್ 1288 ನಂಬರ್ ನ ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಗದ್ದೆಗೆ ಜಾರಿದೆ. ಬಸ್ ನ ಮುಂಭಾಗದ ಗಾಜು ಪುಡಿಯಾಗಿದೆ. 8 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ.
ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Attachments area