ಬ್ಲಾಕ್ ಅಧ್ಯಕ್ಷರಾಗಿ ಗೌರಿ ನೇಮಕ

ಧಾರವಾಡ, ನ12: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಣಿ ಚನ್ನಮ್ಮ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ
ಸೇವೆ ಸಲ್ಲಿಸಿ ಇತ್ತೀಚೆಗೆ ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದ ಬಸವರಾಜ ಮಲಕಾರಿ ಅವರ ಸ್ಥಾನಕ್ಕೆ ನಾಗರಾಜ ಗೌರಿ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ 2004 ರಿಂದ ಧಾರವಾಡ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷನಾಗಿ, ಧಾರವಾಡ ಲೋಕಸಭಾ ಕ್ಷೇತ್ರದ ಅಧ್ಯಕ್ಷನಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿಯ ಕಾರ್ಯದರ್ಶಿಯಾಗಿ ನಾಗರಾಜ ಗೌರಿ ಸೇವೆ ಸಲ್ಲಿಸಿದ್ದಾರೆ.