ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯನರಸಿಂಹ ನೇಮಕ

ಮಾಲೂರು.ಸೆ೨೧: ತಾಲೂಕಿನ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್.ಎಂ.ವಿಜಯನರಸಿಂಹ ಅವರನ್ನು ನೇಮಕಾತಿ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶಿಸಿ ಪ್ರಕಟಿಸಿದ್ದಾರೆ.
ಕೆಡಿಪಿ ಮಾಜಿ ಸದಸ್ಯರಾದ ಹೆಚ್.ಎಂ.ವಿಜಯನರಸಿಂಹ ಅವರು ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಪಕ್ಷ ಸಂಘಟನೆಗಾಗಿ ಶ್ರಮಿಸುತ್ತಿರುವುದನ್ನು ಗುರುತಿಸಿರುವ ಶಾಸಕ ಕೆ.ವೈ.ನಂಜೇಗೌಡ ಶಿಫಾರಸ್ಸಿನ ಮೇರೆಗೆ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ.
ನೂತನ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಹೆಚ್.ಎಂ.ವಿಜಯನರಸಿಂಹ ಅವರು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ತಾಲೂಕು ಬೋರ್ಡ್ ಸದಸ್ಯರು ಹಾಗು ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಟಿ.ಮುನಿಯಪ್ಪ ಅವರು ಕೇಂದ್ರದ ಮಾಜಿ ಸಚಿವ ಕೆಎಚ್ ಮುನಿಯಪ್ಪ ಅವರ ಒಡನಾಡಿಯಾಗಿದ್ದರು, ಟಿ.ಮುನಿಯಪ್ಪನವರ ಪುತ್ರನು ಸಹ ಕಾಂಗ್ರೆಸ್ ಪಕ್ಷದ ಸಂಘಟನೆಗೆ ತೊಡಗಿಸಿಕೊಂಡು ಶಾಸಕ ಕೆ.ವೈ.ನಂಜೇಗೌಡ ಅವರಿಗೆ ಚುನಾವಣೆಗಳಲ್ಲಿ ಹೆಚ್ಚಿನ ಸಹಕಾರ ನೀಡುತ್ತಿದ್ದರು. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಹಾಗೂ ಸಂಘಟನೆಯನ್ನು ಗುರುತಿಸಿರುವ ಇವರಿಗೆ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ನೇಮಕಾತಿ ಆದೇಶ ಪ್ರತಿಯನ್ನು ಕೆಪಿಸಿಸಿ ಕಾರ್‍ಯಾಧ್ಯಕ್ಷ ಸಲೀಂ ಅಹಮದ್ ಅವರಿಂದ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಕೆ.ವೈ.ನಂಜೇಗೌಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಜಿ.ಮಧುಸೂಧನ್, ಪುರಸಭಾ ಮಾಜಿ ಸದಸ್ಯ ಅಶ್ವಥರೆಡ್ಡಿ, ಕಾಂಗ್ರೆಸ್‌ನ ಎಸ್.ಸಿ. ಘಟಕದ ಅಧ್ಯಕ್ಷ ಬ್ಯಾಲಹಳ್ಳಿ ರಮೇಶ್ ಹಾಜರಿದ್ದರು.