ಅಫಜಲಪುರ,ಮೇ.30-ದಕ್ಷಿಣ ಕಾಶಿ ಎಂದೇ ಹೆಸರಾದ ಸುಕ್ಷೇತ್ರ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನದ ಸನ್ನಿಧಿಯಲ್ಲಿ ಪುಂಡ ಪೆÇೀಕರಿಯೊಬ್ಬ ಭಕ್ತರ ಮೇಲೆ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ.
ಗುರು ದತ್ತಾತ್ರೇಯರ ಸನ್ನಿಧಿಗೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಬಳಿ ಇರುವ ಔದುಂಬರ ವೃಕ್ಷದ ಕೆಳಗೆ ಭಕ್ತರು ಕೂತು ದತ್ತ ಚರಿತ್ರೆ ಪಾರಾಯಣ ಮಾಡುವ ಸಮಯದಲ್ಲಿ ಯಲ್ಲಪ್ಪ ಕಲ್ಲೂರ್ ಎಂಬ ವ್ಯಕ್ತಿಯು ಭಕ್ತನ ತಲೆ ಮೇಲೆ ಕಾಲಿಟ್ಟು, ಹಲ್ಲೆ ಮಾಡಿ ದೌರ್ಜನ್ಯ ಎಸಗಿದ್ದಾನೆ. ಗಾಣಗಾಪುರದ ನಿವಾಸಿಯಾಗಿರುವ ಯಲ್ಲಪ್ಪನನ್ನು ವಶಕ್ಕೆ ಪಡೆದಿರುವ ಪೆÇಲೀಸರು ಘಟನೆ ಕುರಿತು ವಿಚಾರಣೆ ನಡೆಸುತ್ತಿದ್ದು ದೇವಲ ಗಾಣಗಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಘಟನೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಕಠಿಣ ಕ್ರಮಕೈಗೊಳ್ಳಲು ಪೆÇಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.