ಭಗತ್‍ಸಿಂಗ್ ಯುವ ಸೇನೆ ವತಿಯಿಂದ ಕಬಡ್ಡಿ ಪಂದ್ಯಾವಳಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಫೆ.25-ಚಂದ ಕವಾಡಿಯಲ್ಲಿ ಒಂದು ವಾರಗಳ ಕಾಲ ನಡೆಯಲಿರುವ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಕೋಡಿಮೋಳೆ ಗ್ರಾಮದ ಭಗತ್‍ಸಿಂಗ್ ಯುವಸೇನೆ ವತಿಯಿಂದ 18 ವರ್ಷ ಒಳಪಟ್ಟ ಮಕ್ಕಳಿಗಾಗಿ ಕಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ತಾಲೂಕಿನ ಕೋಡಿ ಮೋಳೆ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಪಂದ್ಯಾವಳಿಯಲ್ಲಿ 5 ತಂಡಗಳು ಭಾಗವಹಿಸಿದ್ದು, ವಿಜೇತತಂಡದ ವಿದ್ಯಾರ್ಥಿಗಳಿಗೆ ಕಪ್ ಹಾಗೂ ಪದಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಆಯೋಜಕರಾದ ಶಿಕ್ಷಕ ಮನೋಜ್ ಮಸು ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢಗೊಳ್ಳಲಿದ್ದಾರೆ ಎಂದರು. ಹಲವಾರು ಶಾಲೆಗಳಲ್ಲಿ ಮಕ್ಕಳಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ ಇದರಿಂದ ಸಾಕಷ್ಟು ಪ್ರತಿಭೆಗಳು ಹೊರಬರಲಿದೆ ಎಂದು ಅವರ ಸೇವೆಯನ್ನು ಶ್ಲಾಘಿಸಿದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಲಿಯಾಗುತ್ತಿದ್ದು, ಓದುವಕಡೆ ಆಸಕ್ತಿ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ಪೋಷಕರುತಮ್ಮ ಮಕ್ಕಳಿಗೆ ಮೊಬೈಲ್ ಕೊಡುವುದನ್ನು ನಿಲ್ಲಿಸುವ ಜೊತೆಗೆ ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಭಗತ್‍ಸಿಂಗ್ ಯುವಸೇನೆ ಅಧ್ಯಕ್ಷಕಾಂತ ರಾಜು ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗುತ್ತದೆ. ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಹೊರಚೆಲ್ಲಬೇಕು. ಇದರಿಂದ ತಮ್ಮ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ನಾಗೇಶ್(ಅಪ್ಪು), ಆನೇಶ್, ಮನೋಜ್, ವಿಜಯ್, ರಾಜೇಂದ್ರ, ರಾಜು ಮತ್ತಿತರರಿದ್ದರು.