(ಸಂಜೆವಾಣಿ ವಾರ್ತೆ):
ಬಳ್ಳಾರಿ, ಮಾ.23: ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿಯಿಂದ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಧೀರ ಹುತಾತ್ಮ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ 93ನೇ ಹುತಾತ್ಮ ದಿನವನ್ನು ನಗರದ ಸರಳಾದೇವಿ ಕಾಲೇಜು, ಇಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಹಾಗೂ ಇನ್ನಿತರ ಶಾಲಾ-ಕಾಲೇಜು, ಹಾಸ್ಟೆಲ್ ಮತ್ತು ಹಳ್ಳಿಗಳಲ್ಲಿ ಕಾರ್ಯಕ್ರಮಗಳು ಆಚರಿಸಲಾಯ್ತು.
ಎಐಡಿಎಸ್ಓ ಜಿಲ್ಲಾ ಅಧ್ಯಕ್ಷ ರವಿಕಿರಣ್.ಜೆ.ಪಿ ಅವರು “ಭಗತ್ ಸಿಂಗ್, ರಾಜಗುರು, ಸುಖದೇವ್ ಅವರು ಇಡೀ ದೇಶದ ಸ್ವಾತಂತ್ರ್ಯಕ್ಕಾಗಿ ಗಲ್ಲಿಗೇರಿ ಹುತಾತ್ಮರು ಆದ ದಿನ. ಭಗತ್ ಸಿಂಗ್ ಸೇರಿದಂತೆ ಹಲವು ಕ್ರಾಂತಿಕಾರಿಗಳು ದೇಶಕ್ಕೆ ಸ್ವಾತಂತ್ರ್ಯ ಬಂದರೆ ಸಾಲದು ದುಡಿಯುವ ವರ್ಗ ಅಂದರೆ ದೇಶದ 90ರಷ್ಟು ಇರುವ ಶೋಷಿತ ಜನತೆಯ ಕೈಗೆ ಅಧಿಕಾರ ಬರಬೇಕು ಎಂಬ ಗುರಿ ಹೊಂದಿದ್ದರು ಎಂದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷರಾದ ಕೆ.ಈರಣ್ಣ, ಸೆಕ್ರೆಟರಿಯೇಟ್ ಸದಸ್ಯರಾದ ನಿಹಾರಿಕ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.