ಭಗವಾನ್ ಮಹಾವೀರರ ಜಯಂತಿ

ಚಾಮರಾಜನಗರ, ಏ.12:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತುಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ನಗರದಲ್ಲಿ ಇಂದು ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‍ಕಮಾರ್ ಜಿಲ್ಲಾ ರಂಗ ಮಂದಿರದಲ್ಲಿ ಏರ್ಪಾಡಾಗಿದ್ದ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿಯವರಾದ ಎಸ್. ಕಾತ್ಯಾಯಿನಿದೇವಿ ಅವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಭಗವಾನ್ ಮಹಾವೀರರ ಜಯಂತಿಯ ಶುಭಾಶಯಕೋರಿದರು.
ಕನ್ನಡ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಲಿಂಗಯ್ಯ, ಜೈನ ಸಮಾಜದ ಮುಖಂಡರಾದ ಸಿ.ಎನ್. ನಾಗರತ್ನರಾಜು, ಸಿ.ಬಿ. ಸತೀಶ್‍ಕುಮಾರ್, ಪದ್ಮ ಪ್ರಸಾದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.