ಭಗವಾನ ಮಹಾವೀರ ಜಯಂತಿ ಆಚರಣೆ

ಬಾದಾಮಿ,ಏ7: ಪಟ್ಟಣದ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಭಗವಾನ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಎಚ್.ಹಳಗೇರಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರವಿ ಕಂಗಳ, ಎಸ್.ಎಸ್.ಯಲಿಗಾರ, ಬಿ.ಎಫ್.ಕುಂಬಾರ, ಸೇರಿದಂತೆ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು ಹಾಜರಿದ್ದರು.