
ಗದಗ, ಏ5 : ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಭಗವಾನ ಮಹಾವೀರ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಭಗವಾನ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ವಾರ್ತಾಧಿಕಾರಿ ವಸಂತ ಮಡ್ಲೂರ ಉಪಸ್ಥಿತರಿದ್ದರು.