ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 2 ಸಾವಿರ ಬಾಡಿಗೆ ದರ ನಿಗದಿ

ಬಳ್ಳಾರಿ,ನ.05: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 90,781 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಅವರಿಸಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬಲಿಯುವ ಹಂತದಲ್ಲಿದ್ದು, ಈಗಾಗಲೇ ಹಲವು ಕಡೆ ಕಟಾವು ಪ್ರಾರಂಭವಾಗಿದ್ದು ಮತ್ತು ಇನ್ನು 1 ವಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಟಾವು ಪ್ರಾರಂಭವಾಗಲಿದೆ. ಇದಕ್ಕಾಗಿ ಜಿಲ್ಲಾಡಳಿತವು ಭತ್ತ ಕಟಾವು ಯಂತ್ರಕ್ಕೆ ಬಾಡಿಗೆ ದರವನ್ನು ನಿಗದಿಪಡಿಸಿದೆ. ರೈತರು ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದು. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ರೂ. 2,500 ರಿಂದ ರೂ. 3,000 ಗಳ ವರೆಗೆ ಬಾಡಿಗೆ ಹಣ ನಿಗಧಿಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಕೋವಿಡ್-19 ಸೊಂಕಿನ ಸಂಕಷ್ಟದ ಸಂದರ್ಭದಲ್ಲಿ ಭತ್ತ ಬೆಳೆದ ರೈತರಿಗೆ ಪ್ರತಿ ಗಂಟೆಗೆ ಗರಿಷ್ಠ 2 ಸಾವಿರ ರೂ. ಮೀರದಂತೆ ಭತ್ತ ಕಟಾವು ಯಂತ್ರದ ಬಾಡಿಗೆಯನ್ನು ನಿಗಧಿ ಮಾಡಬೇಕು. ತಪ್ಪಿದ್ದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಿಳಿಸಿದ್ದಾರೆ.
ಕಳೆದ ಎರಡು ದಿನಗಳ‌ ಹಿಂದೆ ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾದ ಜಿಲ್ಲಾ ಅಧ್ಯಕ್ಷ. ಗಣಪಾಲ್ ಐನಾಥ್ ರೆಡ್ಡಿ ಮೊದಲಾದವರು ಜಿಲ್ಲಾಧಿಕಾರಿ ಎಸ್.ಎಸಗ.ನಕುಲ್ ಅವರನ್ನು ಭೇಟಿ‌ ಮಾಡಿ. ಭತ್ತ ಕಟಾವು ಯಂತ್ರಗಳ ಮಾಲೀಕರು ವಿಧಿಸುತ್ತಿರುವ ದರ ಹೆಚ್ವಿದ್ದು ಗಂಟೆಗೆ 18 ನೂರು ರೂ ನಿಗಧಿಪಡಿಸುವಂತೆ ಮನವಿ‌ಮಾಡಿದ್ದರು. ಡೀಸೆಲ್ ದರ ಹೆಚ್ಚಳ ಮೊದಲಾದ ಕಾರಣಗಳಿಂದ ಗಂಟೆಗೆ ಎರೆಡು ಸಾವಿರ ರೂ ನಿಗಧಿಪಡಿಸಿದೆ.
ಜಿಲ್ಲಾಡಳಿತದ ಈ ಕ್ರಮವನ್ನು ಅವರು ಸ್ವಾಗತಿಸಿದ್ದಾರೆ