ಭತ್ರಿಯಲ್ಲಿ ಮತ ಕೇಳಿದ ಸೋಮಶೇಖರ ರೆಡ್ಡಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.14: ನಗರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿರುವ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು ಇಂದು ನಗರದ ಭತ್ರಿ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಮತದಾರರಿಗೆ ಮನವಿ ಕರಪತ್ರ ನೀಡಿ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆಗಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ‌ ಮಾಡಿದರು.