ಭದ್ರತಾ ಪಡೆ ಗುಂಡಿಗೆ ಎಲ್‌ಇಟಿ ಉಗ್ರ ಬಲಿ

ಶ್ರೀನಗರ,ಜು.೩೧- ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.
ಬಿನ್ನರ್ ಪ್ರದೇಶದಲ್ಲಿ ನಿನ್ನೆ ರಾತ್ರಿ
ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ಗುಂಡಿನ ದಾಳಿಯಲ್ಲಿ ಓರ್ವ ಎಲ್‌ಇಟಿ ಉಗ್ರ ಸಾವನ್ನಪ್ಪಿದ್ದಾನೆ. ಆತನನ್ನು ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಜೊತೆ ನಂಟು ಹೊಂದಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ.
ಈ ಕುರಿತು ಕಾಶ್ಮೀರದ ಪೊಲೀಸರು ಟ್ವೀಟ್ ಮಾಡಿದ್ದು, ಇರ್ಷಾದ್ ಅಹ್ಮದ್ ಭಟ್ ಮೇ ೨೦೨೨ ರಿಂದ ಭಯೋತ್ಪಾದಕ ಕ್ರಿಯೆಯಲ್ಲಿ ಸಕ್ರಿಯನಾಗಿದ್ದ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಭಯೋತ್ಪಾದಕನಿಂದ ಒಂದು ಎಕೆ ರೈಫಲ್, ಎರಡು ಮ್ಯಾಗಜೀನ್‌ಗಳು ವಶಪಡಿಸಿಕೊಂಡಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಇನ್ನೂ ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ತನಿಖೆಯನ್ನು ಮುಂದುವರೆಸಿದ್ದೇವೆ ಬರೆದುಕೊಂಡಿದ್ದಾರೆ.