ಭದ್ರತೆ ಪರಿಶೀಲನೆ

ಬೆಂಗಳೂರಿನಲ್ಲಿ ನಡೆಯಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗಿಯಾಗುವ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಜೊತೆಯಲ್ಲಿದ್ದಾರೆ.