ಭದ್ರಾ ಮೇಲ್ದಂಡೆ ಯೋಜನೆ: ಒಂದು ವರ್ಷದೊಳಗೆ ಪೂರ್ಣ

ಚಿತ್ರದುರ್ಗ,ಜೂ.೨೫; ಬಯಲಸೀಮೆಯ ಚಿತ್ರದುರ್ಗ ಜಿಲ್ಲೆಗೆ ವರದಾನವಾಗಿರುವ  ಭದ್ರಾ ಮೇಲ್ದಂಡೆ ಯೋಜನೆಯನ್ನು ಒಂದು ವರ್ಷದೊಳಗಾಗಿ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದು ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.ಶಿವಮೊಗ್ಗ  ಜಿಲೆಯ ಭದ್ರಾ ಮೇಲ್ದಂಡೆ  ಕಾಮಗಾರಿ ಪ್ರದೇಶ ಆಗಿರುವ ಶಿವಮೊಗ್ಗ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಯೋಜನೆ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಭದ್ರಾ ಮೇಲ್ದಂಡೆ ಯೋಜನೆಯಡಿ ಪ್ಯಾಕೇಜ್-1ರಲ್ಲಿ ತುಂಗಾ ನಂದಿಯಿಂದ 17.40 ಟಿಎಂಸಿ ನೀರನ್ನು ಲಿಪ್ಟ್ ಮಾಡಿ ಭದ್ರಾ ಜಲಾಶಯಕ್ಕೆ ಹರಿಸುವ ಕಾಮಗಾರಿಗೆ ಇನ್ನಷ್ಟು ವೇಗ ನೀಡಲು  ಶನಿವಾರದಂದು ಭದ್ರಾ ಮೇಲ್ದಂಡೆ ಯೋಜನೆಯ ವಿವಿಧ ಕಾಮಗಾರಿಗಳನ್ನು ಜಿಲ್ಲೆಯ ಎಲ್ಲ ಶಾಸಕರೊಂದಿಗೆ ವೀಕ್ಷಣೆ ಮಾಡಲಾಗಿದ್ದು, ಆಗಬೇಕಾದ ಕೆಲಸ ಕಾರ್ಯಗಳು ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ಬಳಿ ಚರ್ಚಿಸಲಾಗುವುದು ಎಂದರು.