ಭಯಭೀತರಾಗದಂತೆ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿ: ಮುಖ್ಯಮಂತ್ರಿಗಳು

ಬೀದರ:ಮೇ.1: ಕೋವಿಡ್-19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಭಯಭೀತರಾಗುವ ಜನರಲ್ಲಿ ಆತ್ಮವಿಶ್ವಾಸ ಮೂಢಿಸುವಂತಹ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮೊನ್ನೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಮಹಾರಾಷ್ಟ್ರ ರಾಜ್ಯದ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳಿದ್ದು, ಕೋವಿಡ್ ಹರಡುವಿಕೆ ತಡೆಯುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಿ ಜನರ ಪ್ರಾಣ ಉಳಿಸಬೇಕಾದ ಗುರುತರ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ ಎಂದು ಮನವರಿಕೆ ಮಾಡಿದರು.

ಸುಮಾರು 15 ಜಿಲ್ಲೆಗಳಲ್ಲಿ ಶಿವಮೊಗ್ಗ, ದಾವಣಗೇರಿ, ಮೈಸೂರು, ತುಮಕೂರ, ಕೋಲಾರ, ಬೆಳಗಾಂವ, ಹಾಸನ, ರಾಮನಗರ, ಚಾಮರಾಜನಗರ, ಚಿಕ್ಕಮಂಗಳೂರು, ಉಡುಪಿ, ರಾಯಚೂರು, ಬಳ್ಳಾರಿ, ಬೀದರ ಜಿಲ್ಲೆಗಳಲ್ಲಿ ಶೇ.16ರಷ್ಟು ಪಾಸಿಟಿವಿಟಿ ರೇಟ್ ಇದೆ. ಬೀದರ, ಹಾಸನ, ಕಲಬುರಗಿ, ಮೈಸೂರು, ತುಮಕೂರ ಈ ಐದು ಜಿಲ್ಲೆಗಳಲ್ಲಿ ಪಾಜಿಟಿವಿಟಿ ರೇಟು ಹೆಚ್ಚಿದೆ. ಹೀಗಾಗಿ ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎಲ್ಲಾ ರೀತಿಯ ಬಿಗಿಯಾದ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡುವ ಕೆಲಸವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ಹಂತದಲ್ಲಿ ಮಾಡಬೇಕು. ಅದಕ್ಕಾಗಿ ಹಣ ಸಹ ಬಿಡುಗಡೆ ಮಾಡಿದ್ದೇವೆ. ಗ್ರಾಮ ಪಂಚಾಯತಗಳಲ್ಲಿ ಮತ್ತು ತಾಲೂಕುಗಳಲ್ಲಿ ಕಾರ್ಯಪಡೆ ರಚನೆ ಮಾಡಿ ಹಳ್ಳಿಗಳಲ್ಲಿ ಕೂಡ ರೋಗಿಗಳಿಗೆ ಸರಿಯಾಗಿ ಸ್ಪಂದನೆಗೆ ಕಾಳಜಿ ವಹಿಸಬೇಕು. ಈ ಕಾರ್ಯಪಡೆಯಲ್ಲಿ ಪಿ.ಡಿ.ಓ. ಅವರನ್ನು ಕೂಡ ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕೋವಿಡ್ ತಪಾಸಣೆ ಪ್ರಕ್ರಿಯೆ ತೀವ್ರಗೊಳಿಸಬೇಕು. ಟೆಸ್ಟ್ ರಿಸಲ್ಟ್ 24 ಗಂಟೆಯಲ್ಲಿ ಪೂರ್ಣಗೊಳ್ಳುವ ವ್ಯವಸ್ಥೆ ಮಾಡಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ಸರಿಯಾದ ಸಮಯಕ್ಕೆ ತಲುಪುವಂತೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ರೆಮ್‍ಡಿಸಿವರ್ ಔಷಧಿ ಮತ್ತು ಆಕ್ಸಿಜನ್ ಆಡಿಟ್ ಆಗಬೇಕು. ಯಾರಿಗೆ ಆಕ್ಸಿಜನ್ ಅವಶ್ಯಕತೆ ಇದೆಯೋ ಅವರಿಗೆ ಮಾತ್ರ ಕೊಡಿಸುವ ವ್ಯವಸ್ಥೆ ಆಗಬೇಕು ಎಂದು ತಿಳಿಸಿದರು.

ನರೇಗಾ ಯೋಜನೆಯಡಿ ಪ್ರತಿ ಹಳ್ಳಿಗಳಲ್ಲಿ ಉದ್ಯೋಗ ಕೊಡುವುದು ತಪ್ಪದೇ ಮಾಡಬೇಕು. ಕೆಲವರು ಉದ್ಯೋಗ ಸಿಗದೇ ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ಬಂದಿದ್ದು, ಅಂತವರಿಗೆ ಉದ್ಯೋಗ ಸಿಗಬೇಕು. ಪ್ರತಿ ಹಳ್ಳಿಯಲ್ಲಿ ಪಿಡಿಓ ಮುಖಾಂತರ ಜನರಿಗೆ ಮಾಹಿತಿ ನೀಡುವಂತಹದ್ದು ಕಡ್ಡಾಯವಾಗಬೇಕು ಎಂದು ಮುಖ್ಯಮಂತ್ರಿಗಳು ಇದೆ ವೇಳೆ ಸಲಹೆ ಮಾಡಿದರು.

ಜಿಲ್ಲಾಧಿಕಾರಿಗಳ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಕರ್ತವ್ಯದಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಕೋವಿಡ್ ತಡೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಬೀಗಿ ಕ್ರಮವನ್ನು ಕೈಗೊಳ್ಳುವುದಕ್ಕೆ ನಮ್ಮ ಯಾವುದೇ ಆಭ್ಯಂತರವಿಲ್ಲ. ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಸ್ವತಂತ್ರ ನೀಡಿದೆ. ಒಟ್ಟಿನಲ್ಲಿ ಕೋವಿಡ್ ಕಂಟ್ರೋಲ್‍ಗೆ ಬರಬೇಕು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಡಿಎಚ್‍ಓ ಡಾ. ವಿ.ಜಿ.ರೆಡ್ಡಿ ಹಾಗೂ ಇತರರು ಇದ್ದರು.