ಭಯೋತ್ಪಾದನಾ ವಿರೋಧಿ ದಿನ ಆಚರಣೆ

ದೇವನಹಳ್ಳಿ.ಮೇ.೨೪-ಬೆಂಗಳೂರು ಗ್ರಾಮಾಂತರ ಜೆಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ಆಧುನಿಕ ಭಾರತದ ನಿರ್ಮಾತೃ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಆಚರಿಸಲ್ಪಡುವ “ಭಯೋತ್ಪಾದನಾ ವಿರೋಧಿ ದಿನ ಅಂಗವಾಗಿ”ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಚನ” ವನ್ನು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಬೋಧಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.