ಭಯೋತ್ಪಾದನೆಗೆ ಬಿಜೆಪಿಯ ಯಾವ ನಾಯಕರು ಬಲುಪಶುಗಳಲ್ಲ; ಸಿಎಂ

ಬೆಂಗಳೂರು,ಮೇ. 21- ದೇಶದಲ್ಲಿ ಭಯೋತ್ಪಾದನೆಯಿಂದ ಬಿಜೆಪಿಯ ಯಾವ ನಾಯಕರೂ ಪ್ರಾಣ ಕಳೆದುಕೊಂಡಿಲ್ಲ. ಬಲಿಪಶುಗಳೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಭಯೋತ್ಪಾದನೆಯನ್ನು ಬೆಂಬಲಿಸುತ್ತದೆ ಎಂದು ಬಿಜೆಪಿ ಹೇಳುತ್ತದೆ ಆದರೆ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂತಹ ಅನೇಕ ಕಾಂಗ್ರೆಸ್ ನಾಯಕರು ಭಯೋತ್ಪಾದನಾ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂತಹ ಪಕ್ಷದ ನಾಯಕರ ಹತ್ಯೆಯ ಹೊರತಾಗಿಯೂ ಕಾಂಗ್ರೆಸ್ ಭಯೋತ್ಪಾದನೆಯನ್ನು ಬೆಂಬಲಿಸುತ್ತದೆ ಎಂದು ಹೇಳುವ ಬಿಜೆಪಿ ನಾಯಕರ ಹೇಳಿಕೆ ಖಂಡನಾರ್ಹ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32 ನೇ ಪುಣ್ಯತಿಥಿಯಂದ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಮಾತನಾಡಿದ ಅವರು ಭಯೋತ್ಪಾದನೆ ಕುರಿತು ಮೋದಿಯವರ ಹೇಳಿಕೆಗಳನ್ನು ತರಾಟೆಗೆ ತೆಗೆದುಕೊಂಡರು ಮತ್ತು ಯಾವುದೇ ಬಿಜೆಪಿ ಕಾರ್ಯಕರ್ತರು ‘ಭಯೋತ್ಪಾದನಾ ದಾಳಿಯಿಂದ ತಮ್ಮ ಪ್ರಾಣವನ್ನು ಕಳೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.

“ರಾಜೀವ್ ಗಾಂಧಿ ಮತ್ತು ಇಂದಿರಾ ಗಾಂಧಿ ಭಯೋತ್ಪಾದನೆಯ ಬಲಿಪಶುಗಳು, ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ಭಯೋತ್ಪಾದನೆಯನ್ನು ತೊಡೆದುಹಾಕಲು ಹೋರಾಡುತ್ತಿದೆ” ಎಂದು ಬರೆದಿದ್ದಾರೆ.

ದೇಶದಲ್ಲಿ ದ್ವೇಷದ ರಾಜಕಾರಣವನ್ನು ಕೊನೆಗೊಳಿಸುವುದೇ ರಾಜೀವ್ ಗಾಂಧಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಸಿದ್ದರಾಮಯ್ಯ ಹೇಳಿದರು.