ಭಯೋತ್ಪಾದನೆ ನಿಗ್ರಹಕ್ಕೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ,ಜ18: ದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿ ನಿಗ್ರಹಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ವಿಶ್ವಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರ ವಿರುದ್ಧ ಘೋಷಣೆ ಕೂಗುತ್ತ ತಮ್ಮ ಆಕ್ರೋಶ ವ್ಯಕ್ತಪಡಿಸಿದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಬಸವರಾಜ ಕೌಜಲಗಿ, ಬಜರಂಗದಳ ಜಿಲ್ಲಾ ಸಂಚಾಲಕ ಸಿದ್ದು ಹಿರೇಮಠ, ಜಿಲ್ಲಾ ಕಾರ್ಯದರ್ಶಿ ವೀರುಪಾಕ್ಷ ಜೋಡಳ್ಳಿ, ಲಕ್ಷ್ಮಣ ಹೂಗಾರ, ಮಹಾದೇವ ಕೋರಿ ಸೇರಿದಂತೆ ಹಲವರು ಇದ್ದರು.