ಭರಮಸಮುದ್ರದಲ್ಲಿ ಮಣ್ಣಿನೊಂದಿಗೆ ಮಾತುಕತೆ

ಜಗಳೂರು.ಸೆ.೩;  ಮಣ್ಣಿನೊಂದಿಗೆ ಮಾತುಕತೆ ಕಾರ್ಯಕ್ರಮ ಬಹಳ ಉಪಯುಕ್ತವಾಗಿದ್ದು, ಇದರಿಂದ ರೈತರಿಗೆ ಅವಶ್ಯಕ ಕೃಷಿ ಮಾಹಿತಿಗಳು ದೊರೆಯುತ್ತವೆ ಎಂದು ಗಂಗಾವತಿ ಕೃಷಿ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ:ಪಿ.ಆರ್.ಬದ್ರಿಪ್ರಸಾದ್ ಹೇಳಿದರು.ತಾಲ್ಲೂಕಿನ ಭರಮಸಮುದ್ರ ಗ್ರಾಮದಲ್ಲಿ ನೂರಾರು ರೈತರ ಸಮ್ಮುಖದಲ್ಲಿ ಕೃಷಿ ಇಲಾಖೆಯಿಂದ ಮಣ್ಣಿನೊಂದಿಗೆ ಮಾತುಕತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮದ ಬಗ್ಗೆ ಕುರಿತು ವಿಡಿಯೋ ಕಾನ್ ಪ್ರೆನ್ಸ್ ಮೂಲಕ ಅವರು ಮಾತನಾಡಿದರು. ಕೃಷಿ ವಿಚಾರಗಳು ವಿನಿಮಯವಾಗುವುದರಿಂದ ಹೊಸ ಹೊಸ ಆವಿಷ್ಕಾರಗಳು ನಡೆಯುತ್ತವೆ. ಇದರಿಂದ ರೈತರ ಜೀವನ ಸುಧಾರಣೆ ಆಗುವುದರ ಜೊತೆಗೆ ಬೆಳೆದಂತ ಬೆಳೆಗೆ ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೇ ಸ್ವಂತ ಮಾರುಕಟ್ಟೆ ನಿರ್ಮಿಸಲು ಸಹಕಾರಿಯಾಗುತ್ತದೆ. ಮುಂದೆ ನೀವೆಲ್ಲರು ಸ್ವಾವಲಂಬಿ ಜೀವನ ನಡೆಸಬಹುದು ಎಂದು ರೈತರಿಗೆ ಸಲಹೆ ನೀಡಿದರು ಕೃಷಿ ಸಹಾಯಕ ನಿರ್ದೇಶಕ ಶ್ರೀನಿವಾಸುಲು ಮಾತನಾಡಿ ಭರಮಸಮುದ್ರದಲ್ಲಿ ಮಣ್ಣಿನೊಂದಿಗೆ ಮಾತುಕತೆ ಕಾರ್ಯಕ್ರಮ ನಡೆಸಲು ಕಳೆದ ಒಂದು ತಿಂಗಳಿನಿAದ ಚರ್ಚೆ ನಡೆಯುತಿತ್ತು. ಮಹಾಂತೇಶ್ ಬ್ರಹ್ಮ ಮತ್ತು ಗ್ರಾಮ ಪಂಚಾಯತಿ ಸದಸ್ಯ ಜೆ.ಟಿ.ಬಸವರಾಜ್‌ರವರ ಸಹಕಾರದಿಂದ ನಿಮ್ಮೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಹಕಾರಿಯಾಯಿತು ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮದಿಂದ ನಿಮಗೆ ದೊಡ್ಡ ಮಟ್ಟದ ಸಹಾಯವಾಗುತ್ತದೆ. ರೈತರು ವೈಜ್ಞಾನಿಕ ಬೇಸಾಯ ಪದ್ದತಿಯನ್ನು ಅಳವಡಿಸಿಕೊಳ್ಳಲು ಹೆಚ್ಚಿನ ತಿಳುವಳಿಕೆ ಮೂಡಿಸುವುದರ ಜೊತೆಗೆ ಸಾಕಷ್ಟು ಮಾಹಿತಿ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರುಪಶುಇಲಾಖೆ ಸಹಾಯಕ ನಿರ್ದೇಶಕ ಕೆ.ವಿ.ಲಿಂಗರಾಜ್ ಮಾತನಾಡಿ ರೈತರು ಇಂದು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಈ ಕಾರ್ಯಕ್ರಮದಿಂದ ಅವರಿಗೆ ಸಾಕಷ್ಟು ಪ್ರಯೋಜನಕಾರಿ ಅಂಶಗಳು ದೊರೆಯುತ್ತವೆ. ಇನ್ನುಮುಂದೆ ಪ್ರತಿ ತಿಂಗಳು ಭರಮಸಮುದ್ರದಲ್ಲಿ ಕಾರ್ಯಕ್ರಮ ನಡೆದಾಗ ನಾನು ಭಾಗವಹಿಸಿ ಪಶು ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಹೊಲದ ಮಾಲೀಕ ಗಂಗಾಧರ್ ರವರಿಗೆ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹದ ಮಾತುಗಳನ್ನಾಡಿದರು.ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಆತ್ಮ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ರೇಣುಕುಮಾರ, ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಅನಿಲ್ ಕುಮಾರ್, ಗ್ರಾಮ ಪಂಚಾಯತಿ ಸದಸ್ಯರಾದ ಜೆ.ಟಿ.ಬಸವರಾಜ್ ಹನುಮಕ್ಕ ,ಗ್ರಾಮದ ರೈತರು ಉಪಸ್ಥಿತರಿದ್ದರು.