ಭರವಸೆಯ ಬದುಕು ವಿಡಿಯೋ ಸಾಂಗ್ ಬಿಡುಗಡೆ

“‘ಸಾಕು ಇನ್ನು ಸಾಕು ಬರಿ ದೋಷಣೆಯ ನಿಲ್ಲಿಸಿರಿ ಸಾಕು’..” ಹಾಡಿನ ಮೂಲಕ ಜನರಲ್ಲಿ ಭರವಸೆ ಮೂಡಿಸಲು ಹಾಗೂ ಸಕಾರಾತ್ಮಕ ಮನೋಭಾವ ಮೂಡಿಸಲು ತಂಡವೊಂದು ಮುಂದಾಗಿದೆ.

ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಹಾಡಿರುವ ಗೀತೆಗೆ ಹರೀಶ್ ಆರ್ .ಕೆ ಹಾಗೂ ಸಿದ್ಧಾರ್ಥ್ ಹಾಡಿನ ಸಂಯೋಜನೆ ಮಾಡಿದ್ದಾರೆ., ಹರೀಶ್.ಆರ್.ಕೆ ಈ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. “ಫಾರ್ ರಿಜಿಸ್ಟ್ರೇಷನ್ ” ಚಿತ್ರ ನಿರ್ದೇಶಕ ನವೀನ್ ದ್ವಾರಕನಾಥ್ ನಿರ್ದೇಶನ ಮಾಡಿ, ನಿರ್ಮಾಣದ ಜವಬ್ದಾರಿ ಹೊತ್ತು ‘ಭರವಸೆಯ ಬದುಕು’ ಗೀತೆ ಹೊರತಂದಿದ್ದಾರೆ.

ಈ ಹಾಡಿಗೆ ಚಂದನವನ ಹಾಗೂ ರಂಗಭೂಮಿ ಕಲಾವಿದರು, ಸಾಥ್ ನೀಡಿದ್ದಾರೆ. ಈಗಾಗಲೇ ಅದೆಷ್ಟೋ ಮನಸ್ಸುಗಳು ನಕಾರಾತ್ಮಕ ಆಲೋಚನೆಯಲ್ಲಿ ಭರವಸೆಯನ್ನು ಕಳೆದುಕೊಂಡಿದ್ದು ಅವರ ಮಾನಸಿಕ ಒತ್ತಡವನ್ನು ಅನುಭವಿಸುತ್ತಿದ್ದಾರೆ. ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯ ಹದೆಗೆಟ್ಟಿರುವುದರಿಂದ ಜನರಲ್ಲಿನ ಆತ್ಮ ವಿಶ್ವಾಸ ಕುಂದುತ್ತಿದೆ. ಈ ನಿಟ್ಟಿನಲ್ಲಿ ಶ್ರೀ ಸಾಮಾನ್ಯರಲ್ಲಿ ಪಾಸಿಟಿವ್ ಆಲೋಚನೆ ಬೆಳೆಸಲು, ಆತ್ಮ ವಿಶ್ವಾಸ ತುಂಬಲು ಹಾಗೂ ಭರವಸೆ ಮೂಡಿಸಲೆಂದೇ ಈ ಗೀತೆಯನ್ನು ನಿರ್ದೇಶಿಸಲು ಮುಂದಾದೆ ಎನ್ನುತ್ತಾರೆ ನಿರ್ದೇಶಕ ನವೀನ್ ದ್ವಾರಕನಾಥ್.

ಆನಂದ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ಅನಿರುದ್ಧ ಜಟ್ಕರ್, ಚಂದನ್ ಶರ್ಮಾ, ಪ್ರಥ್ವಿ ಅಂಬಾರ್ , ಸಿಂಪಲ್ ಸುನಿ, ವಸಿಷ್ಠ ಸಿಂಹ, ಸೋನು ಗೌಡ, ನಾಗೇಂದ್ರ ಪ್ರಸಾದ್, ಪಿ.ಡಿ.ಸತೀಶ್ ಚಂದ್ರ, ಕೃಷಿ ತಾಪಂಡಾ, ಹರ್ಷಿಕಾ ಪೂಣಚ್ಛ, ರಂಜಿನಿ ರಾಘವನ್, ರಘು ರಾಮನಕೊಪ್ಪ, ರೆಮೋ, ಜೈ ರಾಮ್ ಕಾರ್ತಿಕ್, ಕಿಶನ್ ಬೆಳಗಲಿ, ನವೀನ್ ಶಂಕರ್, ಮಯೂರ ರಾಘವೇಂದ್ರ, ಆರ್.ಜೆ. ಸೌಜನ್ಯ, ವರ್ಷಿಣಿ ಜಾನಕೀರಾಮ್,ಆರ್ ಅಭಿಲಾಷ್, ಯಶ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಮನು ಸೆಡ್‌ಗಾರ್ ವಿಡಿಯೋ ಸಂಕಲನ ಮಾಡಿದ್ದಾರೆ.