ಭವಿಷ್ಯರೂಪಿಸಿಕೊಳ್ಳಲು ನೂತನ ಶಿಕ್ಷಣ ನೀತಿ ಸಹಕಾರಿ.

ಸಂಜೆವಾಣಿ ವಾರ್ತೆ
ಹೊಸಪೇಟೆ ಸೆ8: ನೂತನ ಶಿಕ್ಷಣ ನೀತಿಯು ತಮ್ಮ ಆಸಕ್ತಿಗಳಿಗೆ ಅನುಗುಣವಾಗಿ ಭವಿಸ್ಯರೂಪಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ನೀಡುತ್ತದೆ ಎಂದು ಪ್ರಾಧ್ಯಾಪಕ ಡಾ.ಎಚ್.ಎಂ. ಚಂದ್ದ್ರಶೇಖರ ಶಾಸ್ತ್ರಿ ಹೇಳಿದರು.
ನಗರದ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಸರ್ಕಾರಿ ಕಾಲೇಜ್‍ನಲ್ಲಿ ಮಂಗಳವಾರ ಪದವಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಪ್ರಾಯೋಗಿಕ ಜ್ಞಾನ ಹಾಗೂ ಕೌಶಲ್ಯಗಳು ಉತ್ತಮ ಅವಕಾಶಗಳನ್ನು ನೀಡುವುದರಲ್ಲಿ ಯಾವುದೆ ಅನುಮಾನವಿಲ್ಲಾ ಎಂದರು. ಮೊದಲು ನೀತಿಯ ಬಗ್ಗೆ ಶಿಕ್ಷಕರು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.
ಪ್ರಾಂಶುಪಾಲ ಡಾ.ಬಿ.ಜಿ.ಕನಕೇಶಮೂರ್ತಿ ರಾಷ್ಟ್ರೀಯ ಶಿಕ್ಷಣ-2020ರಲ್ಲಿ ವಿದ್ಯಾರ್ಥಿ ಕೇಂದ್ರಿತವಾದ ಹಲವು ಅಂಶಗಳಿವೆ. ಸ್ಥಳೀಯ ಭಾಷೆಗೆ ಒತ್ತು ನೀಡಲಾಗಿದೆ. ಬಹುನಿರ್ಗಮನ ಹಾಗೂ ಬಹುಆಗಮನ ಈ ಅವಕಾಶ ವಿದ್ಯಾರ್ಥಿಯ ವ್ಯಾಸಂಗವು ವ್ಯರ್ಥವಾಗುವುದಿಲ್ಲ. ನಾಲ್ಕು ವರ್ಷಗಳ ಆನರ್ಸ್ ಪದವಿ ಸ್ನಾಕೋತ್ತರ ಪದವಿ ಮತ್ತು ಸಂಶೋಧನೆಗೆ ಹೆಚ್ಚು ಸಹಾಯಕವಾಗಲಿದೆ. ಮುಕ್ತ ಆಯ್ಕೆಯ ವಿಷಯಗಳೂ ವಿದ್ಯಾರ್ಥಿಯ ಆಸಕ್ತಿಗೆ ಅನುಗುಣವಾಗಿವೆ. ವಿದ್ಯಾರ್ಥಿಗಳು ತಮ್ಮ ಗುರಿಯನ್ನು  ನಿರ್ದಿಷ್ಟಪಡಿಸಿಕೊಂಡಲ್ಲಿ ಈ ನಿಟ್ಟಿನಲ್ಲಿ ಉತ್ತಮ ಪಲಿತಾಂಶಗಳನ್ನು ಪಡೆಯಲು ಸಾಧ್ಯ ಎಂದರು.
ಕಾಲೇಜಿನ ಡಾ.ಕೆ.ವೆಂಕಟೇಶ್, ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಹೆಚ್. ನಿರ್ವಹಿಸಿ ವಂದಿಸಿದರು. ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು