ಭವಿಷ್ಯ ಹೇಳಲು ಆರಂಭಿಸಿದ ಸಿಎಂ: ಎಚ್ ಡಿಕೆ ವ್ಯಂಗ್ಯ

ಮೈಸೂರು, ಮಾ. ೨೮- ಸಿದ್ದರಾಮಯ್ಯನವರು ಎಂದಿನಿಂದ ಭವಿಷ್ಯ ಹೇಳುವುದನ್ನು ಆರಂಭಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರುಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು.ಕುಮಾರಸ್ವಾಮಿ ಅವರು ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೆ ಸೋಲುತ್ತಾರೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಹೆಚ್ಡಿಕೆ ಉತ್ತರಿಸಿ ಸಿದ್ದರಾಮಯ್ಯನವರು ಎಂದಿನಿಂದ ಭವಿಷ್ಯ ಹೇಳುವುದನ್ನು ಕಲಿತುಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದರು.ಚುನಾವಣೆಯ ನಂತರ ಫಲಿತಾಂಶ ಬರಲಿ ಯಾರು ಸೋಲುತ್ತಾರೆ ಯಾರು ಗೆಲ್ಲುತ್ತಾರೆ ನೋಡೊಣ ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಹೆಚ್ಡಿಕೆ ಮೊದಲು ಇವರು ಮೂಲ ಕಾಂಗ್ರೆಸ್ಸಿಗರ ಎಂದು ಹೇಳಿ ಮೂಲ ಕಾಂಗ್ರೆಸ್ಸಿಗರನ್ನೆಲ್ಲ ಕಸದ ಬುಟ್ಟಿಗೆ ಹಾಕಿದ್ದಾರೆ ಎಂದು ಟೀಕಿಸಿದರು.ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಯಾವುದೇ ಗೊಂದಲ ಇಲ್ಲ ೨೦೧೪ ರಿಂದಲೂ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಂದರ್ಥದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಆದರೆ ಈ ಬಾರಿ ಲೋಕಸಭಾ ಚುನಾವಣೆಗೂ ಮುನ್ನವೇ ಒಪ್ಪಂದ ಆಗಿರುವುದರಿಂದ ಮೈತ್ರಿ ಮಾಡಿಕೊಂಡಿರುವುದರಿಂದ ಇದೀಗ ನಮ್ಮ ಹಾಗೂ ಬಿಜೆಪಿಯ ಕಾರ್ಯಕರ್ತರು ಒಟ್ಟಾಗಿ ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಿದರು.ಎಚ್ಡಿಕೆ ಅವರು ಅಧಿಕಾರದಲ್ಲಿದ್ದಾಗಲೇ ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಈಗ ಗೆಲ್ಲುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗಲೇ ಸೋತಿದ್ದಾರೆ ಅದನ್ನು ಅವರು ಮರೆತಿದ್ದಾರೆ ಎಂದು ಹೇಳಿದರು.