ಭಾಗ್ಯನಗರ ಕ್ಯಾಂಪ್‌ನಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಸಿರವಾರ,ಜೂ.೧೦-
ತಾಲೂಕಿನ ಚಾಗಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭಾಗ್ಯನಗರ ಕ್ಯಾಂಪ್ ನಲ್ಲಿ ’ನರೇಗಾ’ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿಯಲ್ಲಿ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.
ನರೇಗಾ ಯೋಜನೆಯಡಿ ದುಡಿಯುವ ಜನರಿಗೆ ಕೆಲಸ ನೀಡುವುದರ ಜೊತೆಗೆ ಕೆಲಸಕ್ಕಾಗಿ ಬರುವ ಕಾರ್ಮಿಕರ ಆರೋಗ್ಯ ತಪಾಸಣೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ಐಇಸಿ ಸಂಯೋಜಕ ರಾಜೇಂದ್ರ ಕುಮಾರ್ ಹೇಳಿದರು.
ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೂಲಿಕಾರರ ಆರೋಗ್ಯ ತಪಾಸಣೆಯನ್ನು ಮಾಡಿದರು. ಈ ವೇಳೆ ಬಿಪಿ, ಶುಗರ್ ಸೇರಿದಂತೆ ಕೆಮ್ಮು, ನೆಗಡಿ, ಜ್ವರ ಸೇರಿದಂತೆ ಹಲವು ಕಾಯಿಲೆಗಳ ತಪಾಸಣೆ ನಡೆಸಿ, ಮಾತ್ರೆಗಳನ್ನು ವಿತರಿಸಲಾಯಿತು.
ಗ್ರಾ.ಪಂ.ಸದಸ್ಯ ಖಾಶಪ್ಪ, ಸಮುದಾಯ ಆರೋಗ್ಯ ಅಧಿಕಾರಿ, ಕೆಎಚ್ ಪಿಟಿ ತಾಲೂಕು ಸಂಯೋಜಕ ಬಾವಾಸಾಬ್, ಜಿಕೆಎಂ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವೆಕರು, ಮೇಟ್ ಹಾಗೂ ಕೂಲಿಕಾರರು ಇದ್ದರು.