ಭಾರತೀಯರ ಕನಸು ನನಸಾದ ಕ್ಷಣ : ರೂಪಾ

ಅಥಣಿ :ಆ.24: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಿದ್ದು, ಹೆಮ್ಮೆಯ ವಿಷಯ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಇತಿಹಾಸ ಬರೆದಿದೆ. ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಆ ಕ್ಷಣವೂ ನಿಜಕ್ಕೂ ರೋಮಾಂಚಕವಾಗಿತ್ತು.ಚಂದ್ರನ ದಕ್ಷಿಣ ಧ್ರುವದ ಮೇಲೆ ನೌಕೆ ಇಳಿಸಿದ ವಿಶ್ವದ ಮೊದಲ ದೇಶ ಭಾರತ ಎನ್ನುವುದು ಹೆಮ್ಮೆಯ ಸಂಗತಿ. ಈ ಸಾಧನೆ ಮಾಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಹಾಗೂ ವಿಜ್ಞಾನಿಗಳಿಗೆ ತಂತ್ರಜ್ಞರಿಗೆ ಹಾಗೂ ಇದಕ್ಕಾಗಿ ಶ್ರಮಿಸಿದ ಸರ್ವರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.