ಭಾರತೀಯ ಜನತಾ ಪಕ್ಷದ ಎರಡು ದಿನಗಳ ಪ್ರಶಿಕ್ಷಣ ವರ್ಗ ತರಬೇತಿ ಕಾರ್ಯಕ್ರಮ

ಕೆ.ಆರ್ .ಪೇಟೆ, ನ.11: ಬಿಜೆಪಿ ಪಕ್ಷದ ಬಲವರ್ಧನೆಗಾಗಿ ಗ್ರಾಮಮಟ್ಟದಿಂದ ಪಕ್ಷವನ್ನು ಸಂಘಟಿಸಿ ಮುಂಬರುವ ಎಲ್ಲಾ ಚುನಾವಣೆಗಳಿಗೆ ಸದೃಢಗೊಳಿಸುವ ನಿಟ್ಟಿನಲ್ಲಿ ತಳಮಟ್ಟದ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಮೂಡ ಅದ್ಯಕ್ಷ ಕೆ.ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಯಶಸ್ವಿನಿ ಸಮುದಾಯ ಭವನದಲ್ಲಿ ಕೆ.ಆರ್.ಪೇಟೆ ತಾಲೂಕು ಭಾರತೀಯ ಜನತಾ ಪಕ್ಷದ ಎರಡು ದಿನಗಳ ಪ್ರಶಿಕ್ಷಣ ವರ್ಗ ತರಬೇತಿ ಕಾರ್ಯಕ್ರಮದಲ್ಲಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಶಿಸ್ತಿನ ಬದ್ದವಾಗಿ ಕೆಲಸ ಮಾಡಿ ಜನಸಾಮಾನ್ಯರ ಮನಸ್ಸು ಗೆಲ್ಲುವುದರ ಮೂಲಕ ಸಾರ್ವಜನಿಕರಿಗೆ ಪಕ್ಷದ ಬಗ್ಗೆ ಗೌರವ ಬರುವಂಥಹ ಕೆಲಸ ಮಾಡಬೇಕು, ಪಕ್ಷದ ತತ್ವ ಸಿದ್ಧಾಂತಗಳಿಂದಾಗಿ ಜನರು ಹೇಗೆ ಬಿಜೆಪಿ ಬಗ್ಗೆ ಒಲವು ತೋರುತ್ತಿದ್ದಾರೆ ಎಂಬ ಅರಿವಿನ ಜಾಗೃತಿಯನ್ನು ಮೂಡಿಸಲು ಪ್ರಶಿಕ್ಷಣ ವರ್ಗವು ನೆರವಾಗಲಿದೆ, ಇದು ಮುಂಬರುವ ಗ್ರಾಮ ಪಂಚಾಯುತಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜಯಗಳಿಸಲು ಭದ್ರಬುನಾದಿಯಾಗಲಿದೆ, ಯಡಿಯೂರಪ್ಪನವರು ರಾಜ್ಯದಲ್ಲಿ ಉತ್ತಮ ಅಭಿವೃದ್ದಿ ಕೆಲಸಗಳನ್ನು ಮಾಡುತ್ತಿದ್ದು ಸಚಿವ ನಾರಾಯಣಗೌಡರು ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ
ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್ ಮಾತನಾಡಿ ಎರಡು ದಿನಗಳ ಕಾಲ ನಡೆಯಲಿರುವ ಪ್ರಶಿಕ್ಷಣ ವರ್ಗ ತರಬೇತಿ ಕಾರ್ಯಕ್ರಮವು ನೆರವಾಗಲಿದ್ದು ಪಕ್ಷದ ಕಾರ್ಯಕರ್ತರು ಪಕ್ಷನಿಷ್ಠೆಯನ್ನು ಬೆಳೆಸಿಕೊಂಡು ಅರ್ಪಣಾ ಮನೋಬಾವದಿಂದ ಕೆಲ ಮಾಡಬೇಕು ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
ಮಂಡಲ ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣೇಗೌಡ, ಸದಾನಂದ, ಸತೀಶ್, ಚೋಕನಹಳ್ಳಿ ಪ್ರಕಾಶ್, ಬಿಜೆಪಿ ಜಿಲ್ಲಾ ವಕ್ತಾರ .ಕೆ.ಕಾಳೇಗೌಡ , ಸಾರಂಗಿ ನಾಗರಾಜು, ಮಂಜುನಾಥ ಗೌಡ, ರವಿ ಸೇರಿದಂತೆ ಬಿಜೆಪಿ ಕಾರ್ಯಕರ್ತರುಗಳು ಹಾಜರಿದ್ದರು.