ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಜಕಣಾಚಾರಿಯವರ ಕೊಡುಗೆ ಅಪಾರ

ಚಾಮರಾಜನಗರ, ಜ.02:- ಸದಾಕಾಲಕ್ಕೂ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರ ಶಿಲ್ಪಿ ಜಕಣಾಚಾರಿಯವರ ಕೊಡುಗೆ ಅಪಾರವಾಗಿದೆ ಎಂದು ನಗರಸಭಾ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟಡಾ. ರಾಜ್‍ಕುಮಾರ್ ಜಿಲ್ಲಾರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಸೇರಿದಂತೆ ವಿಶ್ವದ ನಾನಾಕಡೆ ಅಮರಶಿಲ್ಪಿ ಜಕಣಾಚಾರಿ ಅವರ ಶಿಲ್ಪಕಲೆ ಇಂದಿಗೂ ಜೀವಂತವಾಗಿದೆ. ಅದಕ್ಕೆ ಅವರು ನೀಡಿರುವಕೊಡುಗೆ ಸಾಕ್ಷಿಯಾಗಿದೆ. ಬೇಲೂರು, ಹಳೇಬೀಡು, ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆ ವಿಶ್ವಕರ್ಮರಪ್ರಸ್ತುತತೆಯನ್ನು ಬಿಂಬಿಸುತ್ತಿದೆ. ನಶಿಸಿಹೋಗುತ್ತಿರುವ ವಿಶ್ವಕರ್ಮರ ಕುಲಕಸುಬುಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿ, ಮುಂದುವರೆಸಲು ಎಲ್ಲರು ಕಟಿಬದ್ಧರಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತಜಂಟಿ ನಿರ್ದೇಶಕರಾದ ಮಂಟೇಲಿಂಗಚಾರ್ ಅವರು ಮಾತನಾಡಿ ಇಂದು ವಿಶ್ವವಿಖ್ಯಾತ ಶಿಲ್ಪಿಯ ಸಂಸ್ಮರಣೆ ಎಲ್ಲೆಡೆ ನಡೆಯುತ್ತಿದೆ. ವಿಶ್ವಕರ್ಮರನ್ನು ವಿಶ್ವರೂಪ, ದಕ್ಷಿಣಾಚಾರ್ಯ, ಜಕಣಾಚಾರ್ಯ, ಸ್ಥಪತಿ ಇನ್ನಿತರ ಹೆಸರುಗಳಿಂದ ಗುರುತಿಸಲಾಗುತ್ತಿದೆ. ಸ್ಥಪತಿಎಂದರೇ ಶಿಲ್ಪಿಗಳಲ್ಲಿ ಅಗ್ರಗಣ್ಯ ಎಂದರ್ಥ. ವಾಸ್ತುಪ್ರಕಾರ ಶಿಲ್ಪ ರಚಿಸುವವರನ್ನು ಸ್ಥಪತಿಎನ್ನಲಾಗುತ್ತದೆ. ಸ್ಥಪತಿಯಾದವನುತನ್ನ ಹೆಸರನ್ನು ಎಲ್ಲೂ ಪ್ರಸ್ತುತಪಡಿಸುವುದಿಲ್ಲ ಎಂದರು.
ಸೃಷ್ಠಿಯ ಮೂಲಕರ್ತೃವಾಗಿರುವ ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಇಂದು ಜಗತ್ತಿನ ಎಲ್ಲೆಡೆ ಪಸರಿಸಿದೆ. ಪ್ರಪಂಚದಎಲ್ಲಾ ವಿದ್ಯೆಗಳ ಮೂಲವಾಗಿರುವ ಜಕಣಾಚಾರಿ ಅವರನ್ನು ಜಗತ್ತಿನ ಮೊದಲ ಮುಖ್ಯಎಂಜಿನಿಯರ್ ಎನ್ನಬಹುದು. ಜಕಣಾಚಾರಿಯವರು ಸಾಮಾನ್ಯಜನರಿಗೆ ದೇವರ ಪರಿಕಲ್ಪನೆನೀಡುವ ಮಧ್ಯಸ್ಥಿಕೆದಾರರಾಗಿದ್ದಾರೆ. ವಿಶ್ವಕರ್ಮರ ಶಿಲ್ಪಕಲೆ ಅಮರವಾಗಿದೆ ಎಂದು ತಿಳಿಸಿದರು.
ಶಿಲ್ಪಕಲೆಯಲ್ಲಿ ಶ್ರೀಮಂತ ಪರಂಪರೆ ಹೊಂದಿರುವ ವಿಶ್ವಕರ್ಮ ಸಮುದಾಯ ತಮ್ಮ ಕುಲಕಸುಬುಗಳ ಜೊತೆಗೆಶಿಕ್ಷಣ ಪಡೆದು ಸಂಘಟಿತರಾಗಬೇಕು. ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಇತರರಲ್ಲೂ ಜಾಗೃತಿ ಮೂಡಿಸಬೇಕು. ಜೀವನ ಸಾರ್ಥಕ ಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮುದಾಯ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಮಂಟೇಲಿಂಗಚಾರ್ ಅವರು ತಿಳಿಸಿದರು.
ನಗರಸಭಾ ಸದಸ್ಯರಾದ ಮಮತಾ ಬಾಲಸುಬ್ರಮಣ್ಯ ಅವರು ಮಾತನಾಡಿ ಪ್ರತಿಯೊಬ್ಬರು ಶ್ರದ್ಧೆ ಹಾಗೂ ನಂಬಿಕೆಯಿಂದ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆಎಂಬುದಕ್ಕೆ ಜಕಣಾಚಾರಿಯವರೇ ಸಾಕ್ಷಿಯಾಗಿದ್ದಾರೆ. ಜಕಣಾಚಾರಿಯವರು ಈ ನಾಡಿನ ಶಿಲ್ಪಕಲೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.
ಕನ್ನಡ ಮತ್ತು ಸಂಸ್ಕøತಿಇಲಾಖೆಯ ಸಹಾಯಕ ನಿರ್ದೇಶಕ ಗುರುಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಗಂಗಾಧರ್, ವಿಶ್ವಕರ್ಮಅಭಿವೃದ್ಧಿ ನಿಗಮದ ಸದಸ್ಯ ಶ್ರೀನಿವಾಸಮೂರ್ತಿ, ಸಮುದಾಯದ ಮುಖಂಡರಾದ ಸೋಮಣ್ಣಚಾರ್, ಕುಮಾರ್, ಸೌಭಾಗ್ಯ, ಹಂಡ್ರಕಳ್ಳಿ ಶಂಭು ಆಚಾರ್ ಇತರರು ಕಾರ್ಯಕ್ರಮದಲ್ಲಿಇದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕಾಡಹಳ್ಳಿಯ ನಾಗಲಿಂಗೇಶ್ ಮತ್ತು ತಂಡದವರು ಹಾಗೂ ನಗರದ ಪರಿಸರ ಪ್ರೇಮಿ ಸಿ.ಎಂ. ವೆಂಕಟೇಶ್ ಅವರು ನಡೆಸಿಕೊಟ್ಟ ಗೀತಗಾಯನ ಎಲ್ಲರ ಗಮನ ಸೆಳೆಯಿತು.