ಭಾರತ್ ಸ್ಕೌಟ್ಸ್, ಗೈಡ್ಸ್ ಕ್ಯಾಲೆಂಡರ್ ಬಿಡುಗಡೆ

ಕೋಲಾರ,ಜ.೯:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಸಂಸ್ಥೆ ನೂತನವಾಗಿ ಹೊರತಂದಿರುವ ೨೦೨೧ ರ ಕ್ಯಾಲೆಂಡರನ್ನು, ಅಬಕಾರಿ ಮತ್ತು ಜಿಲ್ಲಾಉಸ್ತುವಾರಿ ಸಚಿವ ಹೆಚ್.ನಾಗೇಶ್ ಅವರು ನಗರದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ, ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಜಿಲ್ಲಾಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಉಪಾಧ್ಯಕ್ಷೆ ಯಶೋಧ ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಕೆ.ಜಿ.ಎಫ್ ಜಿಲ್ಲಾ ರಕ್ಷಣಾಧಿಕಾರಿ ಇಲಖಿಯಾ ಕರುಣಾಕರನ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ಕೆ.ಗೋಪಾಲರೆಡ್ಡಿ, ಜಿಲ್ಲಾ ಆಯುಕ್ತ ಕೆ.ಆರ್.ಸುರೇಶ್, ಜಿಲ್ಲಾ ಕಾರ್ಯದರ್ಶಿ ಎಂ.ವಿ.ಜನಾರ್ಧನ್, ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು, ಜಿಲ್ಲಾ ಸಂಘಟಕ ವಿ.ವಿಶ್ವನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.