ಭಾರತ-ಕಿವೀಸ್ ಹಣಾಹಣಿ ಸರಣಿ ಕೈವಶದತ್ತ ರೋಹಿತ್ ಚಿತ್ತ


ರಾಂಚಿ,ನ.೧೯- ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳ ನಡುವಿನ ೨ನೇ ಟಿ-೨೦ ಪಂದ್ಯ ಇಂದು ನಡೆಯಲಿದೆ. ಜೈಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಪಡೆ ೫ ವಿಕೆಟ್‌ಗಳಿಂದ ಗೆಲುವು ಸಾಧಿಸಿದ್ದು, ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದೆ.
ಇಂದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ಸ್ವದೇಶದಲ್ಲಿ ಸತತ ೫ನೇ ಟಿ-೨೦ ಸರಣಿ ಗೆದ್ದ ಕೀರ್ತಿಗೆ ಪಾತ್ರವಾಗಲಿದೆ. ರೋಹಿತ್ ಶರ್ಮಾ ಮತ್ತು ಮುಖ್ಯ ತರಬೇತುದಾರ ರಾಹುಲ್‌ದ್ರಾವಿಡ್ ಸಾರಥ್ಯದಲ್ಲಿ ಮೊದಲ ಸರಣಿ ಗೆಲ್ಲಲು ಭಾರತ ತಂತ್ರ ರೂಪಿಸಿದೆ.
ತಂಡ ಗೆಲುವು ಸಾಧಿಸುವ ದೃಷ್ಟಿಯಿಂದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್‌ನತ್ತ ಹೆಚ್ಚು ಗಮನ ನೀಡಬೇಕಾಗಿದೆ. ಕೆ.ಎಲ್ ರಾಹುಲ್ ಮೊದಲ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಲು ವಿಫಲರಾಗಿದ್ದಾರೆ. ಈಗ ಅವರ ಮೇಲೆ ಒತ್ತಡ ಹೆಚ್ಚಾಗಿದೆ.
ಸೂರ್ಯಕುಮಾರ್ ಯಾಧವ್ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಇಂದಿನ ಪಂದ್ಯದಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವ ವಿಶ್ವಾಸದಲ್ಲಿದ್ದಾರೆ.
ಎರಡನೇ ಪಂದ್ಯದಲ್ಲಿ ಕಣಕ್ಕಿಳಿಸಿದ ತಂಡವನ್ನೇ ೨ನೇ ಪಂದ್ಯದಲ್ಲೂ ಉಳಿಸಿಕೊಳ್ಳುವ ಸಾಧ್ಯತೆ ಇದ್ದು, ಒಂದೆರೆಡು ಬದಲಾವಣೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಸರಣಿಯಲ್ಲಿ ಹೋರಾಟವನ್ನು ಜೀವಂತವಾಗಿರಿಸಿಕೊಳ್ಳ ಬೇಕಾದರೆ ಪ್ರವಾಸಿ ನ್ಯೂಜಿಲ್ಯಾಂಡ್ ತಂಡ ಇಂದಿನ ಪಂದ್ಯವನ್ನು ಗೆಲ್ಲಬೇಕಾಗಿದೆ. ಹೀಗಾಗಿ ನಾಯಕ ಟಿಮ್‌ಸೌದಿ ಮೇಲೆ ಒತ್ತಡವಿದೆ.
ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಸಂಘಟಿತ ಹೋರಾಟ ನಡೆಸುವ ಮೂಲಕ ಭಾರತಕ್ಕೆ ತಿರುಗೇಟು ನೀಡಲು ಕಿವೀಸ್ ಸಜ್ಜಾಗಿದೆ.ಒಟ್ಟಾರೆ ಉಭಯ ತಂಡಗಳ ನಡುವಣ ಗೆಲುವಿಗಾಗಿ ತೀವ್ರ ಪೈಪೋಟಿ ಏರ್ಪಡಲಿದೆ.