ಕೆ.ಆರ್.ಪೇಟೆ.ಜೂ.24:- ತಾಲ್ಲೂಕಿನ ಕಿಕ್ಕೇರಿ ಗ್ರಾಮದ ವೀರ ಯೋಧರೊಬ್ಬರು ಜಮ್ಮು-ಕಾಶ್ಮೀರದ ಭಾರತ-ಪಾಕಿಸ್ತಾನ ಗಡಿಯಲ್ಲಿ ಭಾರತೀಯ ಸೇನೆಯ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ.
ಕಿಕ್ಕೇರಿ ಗ್ರಾಮದ ಕಿಕ್ಕೇರಮ್ಮನ ದೇವಾಲಯದ ಹಿಂಭಾಗದಲ್ಲಿ ವಾಸವಿರುವ, ಗ್ರಾಮ ಪಂಚಾಯಿತಿ ಸದಸ್ಯರಾದ ಭಾರತಿ ಮತ್ತು ಪ್ರಕಾಶ್ ದಂಪತಿಗಳ ಪುತ್ರರಾಗಿರುವ ಜನಾರ್ಧನ್ ಗೌಡ(30) ಮೃತ ಯೋಧರಾಗಿದ್ದಾರೆ.
2014ರಲ್ಲಿ ಭಾರತೀಯ ಸೇನೆಗೆ ಯೋಧನಾಗಿ ಆಯ್ಕೆಯಾಗಿದ್ದ ಜನಾರ್ಧನ್ ಗೌಡ ಜಮ್ಮು-ಕಾಶ್ಮೀರದ ಶ್ರೀನಗರದ ಭಾರತ-ಪಾಕಿಸ್ತಾನ ಗಡಿಯಲ್ಲಿ ಕಳೆದ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.
ಕಳೆದ ಹಲವು ದಿನಗಳಿಂದ ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಜನಾರ್ಧನ್ ಗೌಡ ಅವರಿಗೆ ಶ್ರೀನಗರ ಸೇನಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಂಡಿಗಡದ ಕಮಾಂಡರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಚಾರವನ್ನು ಸಹೋದರ ಮಹೇಂದ್ರ ಅವರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದ ಹಿಂದೆ ಚಂಡಿಗಡ ಆಸ್ಪತ್ರೆಗೆ ಹೋಗಿದ್ದು ಸಹೋದರನ ಆರೈಕೆಯಲ್ಲಿ ನಿರತರಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಯೋಧ ಜನಾರ್ಧನ್ ಗೌಡ ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಮೃತ ಯೋಧನ ಪೆÇೀಷಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದಾಗ ಯೋಧ ಜನಾರ್ದನ್ ಗೌಡ ದೇಶಕ್ಕಾಗಿ ಹುತಾತ್ಮರಾಗಿರುವ ಬಗ್ಗೆ ಮಾಹಿತಿ ಧೃಡಪಟ್ಟಿರುತ್ತದೆ.
ಕಳೆದ 9ವರ್ಷಗಳಿಂದ ಜಮ್ಮು- ಕಾಶ್ಮೀಯದ ಭಾರತ- ಪಾಕಿಸ್ತಾನ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೀರಯೋಧ ಜನಾರ್ಧನ್ ಗೌಡ ಕಳೆದ 3ತಿಂಗಳ ಹಿಂದಷ್ಟೇ ಹುಟ್ಟೂರು ಕಿಕ್ಕೇರಿ ಗ್ರಾಮಕ್ಕೆ ಬೇಟಿ ನೀಡಿ ಸೇವೆಗೆ ವಾಪಸ್ಸಾಗಿದ್ದರು. 2019ರಲ್ಲಿ ರಂಜಿತಾ ಅವರೊಂದಿಗೆ ವಿವಾಹವಾಗಿದ್ದು ದಂಪತಿಗಳಿಗೆ ಎರಡು ವರ್ಷದ ಹೆಣ್ಣು ಮಗುವಿದೆ. ಮಧ್ಯಾಹ್ನ 3ಗಂಟೆಯ ವೇಳೆಗೆ ಕಿಕ್ಕೇರಿಗೆ ಯೋಧನ ಮೃತ ದೇಹವನ್ನು ತರಲಾಗುತ್ತದೆ.
ಕಿಕ್ಕೇರಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸಾರ್ವಜನಿಕರಿಗೆ ಹಾಗೂ ದೇಶಾಭಿಮಾನಿಗಳಿಗೆ ಮೃತ ದೇಹದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ನಂತರ ತಾಲ್ಲೂಕು ಆಡಳಿತ ಹಾಗೂ ಸೇನೆ, ಪೆÇೀಲಿಸ್ ಇಲಾಖೆಯ ಸರ್ಕಾರಿ ಗೌರವದೊಂದಿಗೆ ಕುಟುಂಬದವರು ನಿರ್ಧರಿಸುವ ಸ್ಥಳದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ತಾಲ್ಲೂಕು ಕಚೇರಿಯ ಮೂಲಗಳು ತಿಳಿಸಿವೆ.
ಮೃತ ಯೋಧ ಜನಾರ್ಧನ್ ಗೌಡ ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ, ಶಾಸಕರಾದ ಎಚ್.ಟಿ.ಮಂಜು, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಮುಖಂಡರಾದ ಬಿ.ಎಲ್.ದೇವರಾಜು, ಕೆ.ಎಸ್.ಪ್ರಭಾಕರ್, ಕಿಕ್ಕೇರಿ ಸುರೇಶ್, ವಿಜಯ್ ರಾಮೇಗೌಡ, ಆರ್.ಟಿ.ಓಮಲ್ಲಿಕಾರ್ಜುನ್, ಎಸ್.ಅಂಬರೀಶ್ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.