ಭಾರತ, ಪಾಕ್ ವಿಮಾನ ಸಂಚಾರಕ್ಕೆ ಕೆನಡಾ ಬ್ರೇಕ್


ನವದೆಹಲಿ,ಏ.೨೩- ಭಾರತ ಮತ್ತು ಪಾಕಿಸ್ತಾನದಲ್ಲಿ ನಿತ್ಯ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಎರಡು ದೇಶದಿಂದ ಬರುವ ಎಲ್ಲಾ ವಿಮಾನಗಳ ಸಂಚಾರವನ್ನು ಕೆನಡ ೩೦ ದಿನಗಳವರೆಗೆ ರದ್ದು ಮಾಡಿದೆ.
ಭಾರತದಿಂದ ಕೆನಡಾಕ್ಕೆ ಬರುತ್ತಿರುವ ಭಾರತೀಯರಲ್ಲಿ ಸೋಂಕು ಸಂಖ್ಯೆ ಹೆಚ್ಚಿಗೆ ಕಾಣಿಸಿಕೊಳ್ಳುತ್ತಿದೆ.ಈ ಹಿನ್ನೆಲೆಯಲ್ಲಿ ಮುಂದಿನ ೩೦ ದಿನಗಳ ಕಾಲ ಅಲ್ಲಿಂದ ಬರುವ ಎಲ್ಲಾ ವಿಮಾನ ಸಂಚಾರ ರದ್ದು ಮಾಡಿರುವುದಾಗಿ ಆರೋಗ್ಯ ಸಚಿವ ಪೆಟಿ ಹಾಡ್ಜು ತಿಳಿಸಿದ್ದಾರೆ.
ಜೊತೆಗೆ ಪಾಕಿಸ್ತಾನದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ತಾತ್ಕಾಲಿಕವಾಗಿ ವಿಮಾನ ಸಂಚಾರ ರದ್ದು ಮಾಡಲಾಗಿದೆ. ಕೆನಡಾದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಸೋಂಕು ಹೆಚ್ಚಳ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಸಾರಿಗೆ ಸಚಿವ ಒಮರ್ ಅಲ್‌ಬ್ರಾ ಮಾತನಾಡಿ, ಭಾರತದಲ್ಲಿ ನಿನ್ನೆ ಒಂದೇ ದಿನ ೩.೧೪ ಲಕ್ಷ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇಂದೂ ಕೂಡ ದಾಖಲೆಯ ಸೋಂಕು ಭಾರತದಲ್ಲಿ ಕಾಣಸಿಕೊಂಡಿದೆ. ಹೀಗಾಗಿ ಅನಿವಾರ್ಯವಾಗಿ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದಿಂದ ಬರುವ ಎಲ್ಲಾ ಪ್ರಯಾಣಿಕತ ವಿಮಾನ ಸಂಚಾರ ರದ್ದು ಮಾಡಲಾಗಿದೆ. ಆದರೆ ಸರಕು ಸಾಗಾಣಿಕೆಯ ವಿಮಾನಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಅವರು ಹೇಳಿದ್ದಾರೆ.
ಭಾರತದಿಂದ ಕೆನಡಕ್ಕೆ ವಿಮಾನದ ಮೂಲಕ ಬರುತ್ತಿರುವ ಮಂದಿಯ ಪೈಕಿ ಅರ್ದದಷ್ಟು ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ.ಹೀಗಾಗಿ ಅನಿವಾರ್ಯವಾಗಿ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈಗಾಗಲೇ ಕೆನಡಾ, ಇಂಗ್ಲೆಂಡ್ ಸೇರಿದಂತೆ ಹಲವು ರಾಷ್ಟ್ರಗಳ ವಿಮಾನ ಸಂಚಾರ ರದ್ದು ಮಾಡಿದೆ.