ಭಾರತ ಪ್ರವಾಸ ರದ್ದುಪಡಿಸಿದ ಬೋರಿಸ್ ಜಾನ್ಸನ್

ಲಂಡನ್, ಏ 19-ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಈಗಾಗಲೇ ವಿಳಂಬವಾಗಿದ್ದ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ಮುಂದಿನ ವಾರಕ್ಕೆ ನಿಗದಿಯಾಗಿತ್ತು. ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ಕಾರಣ ರದ್ದುಗೊಳಿಸಲಾಗಿದೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ.

ತಮ್ಮ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಈ ತಿಂಗಳ ಬಳಿಕ ಭಾರತದ ಪ್ರಧಾನಿ ಹಾಗೂ ಬ್ರಿಟನ್ ನ ಪ್ರಧಾನಿ ಇಬ್ಬರೂ ಮಾತುಕತೆ ನಡೆಸಲಿದ್ದಾರೆ ಎಂದು ಬ್ರಿಟನ್ ಪ್ರಧಾನಿ ಕಚೇರಿ ಹೇಳಿಕೆ ತಿಳಿಸಿದೆ.