ಭಾರಿ ಮಳೆಗೆ ನೂರಾರು ಸಾವು

ನವದೆಹಲಿ, ಜು.೨೨- ಚೀನಾ, ಜರ್ಮನಿ,ಬೆಲ್ಜಿಯಂ ಸೇರಿದಂತೆ ಜಗತ್ತಿನ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನೂರಾರು ಮಂದಿ ಸಾವನ್ನಪ್ಪಿದ್ದು ಹಲವು ದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಜರ್ಮನಿಯಲ್ಲಿ ೧೬೧ ಮಂದಿ,ಬೆಲ್ಜಿಯಂ ನಲ್ಲಿ ೩೧ ಮಂದಿ ಚೀನಾದಲ್ಲಿ ೨೫ ಮಂದಿ ಮೃತಪಟ್ಟಿದ್ದಾರೆ. ಜೊತೆಗೆ ಜಗತ್ತಿನ ವಿವಿಧ ದೇಶಗಳಲ್ಲಿ ಮಳೆಯಿಂದ ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಹಲವು ದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ
ಚೀನಾದ ಹೆನಾನ್ ಪ್ರಾಂತ್ಯದಲ್ಲಿ ಮಳೆಯಿಂದ ೨೫ ಮಂದಿ ಮೃತಪಟ್ಟಿದ್ದು ಹಲವು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹ ಮತ್ತು ಮನೆ ಕಟ್ಟಡ ಕುಸಿತದಿಂದ ಸಿಲುಕಿದ ಮಂದಿಯ ಪ್ರಾಣ ರಕ್ಷಣೆಗೆ ರಕ್ಷಣಾ ಕಾರ್ಯ ಸಾಗಿದೆ.
ಬ್ರೆಜಿಲ್ ಮತ್ತು ಜರ್ಮನಿಯಲ್ಲಿ ಮಳೆಯಿಂದ ಭಾರಿ ಅನಾಹುತ ಸಂಭವಿಸುತ್ತಿದೆ. ಅನೇಕ ಕಡೆ ತಗ್ಗುಪ್ರದೇಶಗಳು ಸಂಪೂರ್ಣವಾಗಿ ಜಲಾವೃತವಾಗಿವೆ.
ಮಳೆಗಾಲದಿಂದ ಸಮಸ್ಯೆಗೆ ಸಿಲುಕಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸ ಸಾಗಿದೆ.
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಜರ್ಮನಿ ಸೇರಿದಂತೆ ವಿವಿಧ ದೇಶಗಳು ಸ್ಥಳೀಯಾಡಳಿತಗಳಿಗೆ ಸೂಚನೆ ನೀಡಿದೆ.
ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದ ಅನೇಕ ಮಂದಿ ಸಾವನ್ನಪ್ಪಿದ್ದು ಮತ್ತಷ್ಟು ಮಂದಿ ತೊಂದರೆಗೆ ಸಿಲುಕಿದ್ದಾರೆ.