ಭಾರೀ ಮಳೆ ನಾಲ್ವರ ಸಾವು

ಪಟಿಯಾಲ, ಜು. ೨೨- ಪಂಜಾಬ್ ನ ಪಟಿಯಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ನಾಲ್ವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡ ಘಟನೆ ನಡೆದಿದೆ.

ಮೃತರು ಹಾಗೂ ಗಾಯಾಳುಗಳು ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಬಿರುಗಾಳಿ ಮತ್ತು ಮಳೆಯಿಂದಾಗಿ ಹಲವಾರು ಮರಗಳು ಬಿದ್ದು ಹಲವಾರು ವಾಹನಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿರುವುದರಿಂದ ಪಟಿಯಾಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಹವಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ನಗರದಲ್ಲಿ ಸುರಿಯುತ್ತಿರುವ ಮಳೆಯು ಕಳೆದ ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿಯಲ್ಲಿ ೭೨ ಮಿಮೀ ಮಳೆಯನ್ನು ದಾಖಲಿಸಿದೆ.