ಭಾಲ್ಕಿಯಲ್ಲಿ ಬಿಜೆಪಿ ಎಸ್.ಸಿ ಮೋರ್ಚಾ ಸಮಾವೇಶ ಇಂದು

ಭಾಲ್ಕಿ: ಮಾ.17:ಪಟ್ಟಣದ ಮಹಾತ್ಮಾಗಾಂಧಿ ವೃತ್ತದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾ ಸಮಾವೇಶ ಮಾ.17 ರಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಈಶ್ವರಸಿಂಗ್ ಠಾಕೂರ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಇತ್ತೀಚೆಗೆ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಬಿಜೆಪಿಗೆ ಸಿಕ್ಕ ಜನ ಬೆಂಬಲದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಡಾ| ಬಾಬಾ ಸಾಹೇಬ ಅಂಬೇಡ್ಕರ್ ರವರ ತತ್ವ ಸಿದ್ದಾಂತದ ಮೇಲೆ ವಿಶ್ವಾಸ ವಿಟ್ಟು ಬಿಜೆಪಿ ಕಾರ್ಯಮಾಡುತ್ತಾ ಬಂದಿದೆ. ಮಾ.17 ರಂದು ನಡೆಯಲಿರುವ ಎಸ್.ಸಿ ಮೋರ್ಚಾ ಸಮಾವೇಶದಲ್ಲಿ ಭಾಲ್ಕಿ ಪಟ್ಟಣದಲ್ಲಿ ಸುಮಾರು 15 ರಿಂದ 20 ಸಾವಿರ ಜನ ಸೇರುವ ಸಂಭವವಿದೆ. ಸವಾವೇಶದಲ್ಲಿ ರಾಜ್ಯ ಮತ್ತು ರಾಷ್ಟ್ರದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಮೋರ್ಚಾಗಳನ್ನು ರಚಿಸಿ, ಅವಗಳ ಮೂಲಕ ಸಮಾವೇಶ ಮಾಡಿ ಬಿಜೆಪಿಯ ತತ್ವ ಸಿದ್ದಾಂತಗಳು ಮತ್ತು ಡಬಲ್ ಇಂಜಿನ ಸರ್ಕಾರ ಮಾಡಿರುವ ಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವಾಗಲಿದೆ ಎಂದು ಹೇಳಿದರು.
ಬಿಜೆಪಿ ಯುವ ಮುಖಂಡ ಡಿ.ಕೆ.ಸಿದ್ರಾಮ ಮಾತನಾಡಿ, ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ರವರ ಹೆಸರು ಬಳಸಿಕೊಂಡು ಮತ ಪಡೆಯುತ್ತಿದೆಯೇ ಹೊರತು ಡಾ| ಬಾಬಾ ಸಾಹೇಬ ಅಂಬೇಡ್ಕರರಿಗೆ ಯಾವುದೇ ತರಹದ ಮಾನ್ಯತೆ ನೀಡಿಲ್ಲ. ಇವಾಗ ಬಿಜೆಪಿ ಸರ್ಕಾರ ಡಾ| ಬಾಬಾ ಸಾಹೇಬ ಅಂಬೇಡ್ಕರ್ ರವರ ಹೆಸರಿನಲ್ಲಿ ಅವರು ಬಳಸಿದ ಪುಣ್ಯ ಕ್ಷೇತ್ರಗಳ ನಿರ್ಮಾಣದ ಕಾರ್ಯಮಾಡುತ್ತಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಪಂಡಿತ ಶಿರೋಳೆ, ಶಿವರಾಜ ಗಂದಗೆ, ಜೈಕುಮಾರ ಕಾಂಗೆ, ಜನಾರ್ಧರನ ಬಿರಾದಾರ, ಸುರೇಶ ಬಿರಾದಾರ, ಸುರೇಶ ಹುಬ್ಳಿಕರ, ಸಂಗಮೇಶ ಭೂರೆ, ಸೂರಜಸಿಂಗ್ ರಜಪೂತ ಉಪಸ್ಥಿತರಿದ್ದರು.