ಭಾವಚಿತ್ರ ಭಾವನೆಗಳ ಅನಾವರಣ..

ಭಾವಚಿತ್ರ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಭಾವನೆ ಗಳನ್ನು ಅನಾವರಣ ಮಾಡಲು ತಂಡ ಮುಂದಾಗಿದೆ. ಬೆಂಗಳೂರು, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಮುಂತಾದ
ಕಡೆ ೫೫ದಿನಗಳ ಚಿತ್ರೀಕರಣವಾಗಿದೆ. ಗಿರೀಶ್ ಕುಮಾರ್ ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ಗಾನವಿ ಮತ್ತು ಚಕ್ರವರ್ತಿ ನಾಯಕ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಮೊಬೈಲ್ ಬಂದಾಗಿನಿಂದ ಎಲ್ಲರಿಗೂ “ಭಾವಚಿತ್ರ ದ ಮೇಲೆ ಹೆಚ್ಚಿನ ಒಲವು. ಕ್ಯಾಮೆರಾ ಹಾಗೂ ಭಾವಚಿತ್ರದ ಮೇಲೆ ಚಿತ್ರದ ಕಥೆ ಸಾಗುತ್ತದೆ. ಇದನ್ನು ಟೆಕ್ನೋ ಥ್ರಿಲ್ಲರ್ ಅಂತಲೂ ಕರೆಯಬಹುದು. ಇದಷ್ಟೇ ಅಲ್ಲ. ಪ್ರೀತಿ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ ಎನ್ನುತ್ತಾರೆ ನಿರ್ದೇಶಕ ಗಿರೀಶ್ ಕುಮಾರ್. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಶಿವು ಬೇರಗಿ ಹಾಗೂ ವಿಶ್ವಜಿತ್
ರಾವ್ ಬರೆದಿರುವ ಹಾಡುಗಳಿಗೆ ಗೌತಮ್ ಶ್ರೀವತ್ಸ ಸಂಗೀತ ನೀಡಿದ್ದಾರೆ. ಅಜೇಯ್ ಕುಮಾರ್ ಛಾಯಾಗ್ರಹಣ ಹಾಗೂ ರತೀಶ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಚಕ್ರವರ್ತಿ, ಗಾನವಿ ಲಕ್ಷ್ಮಣ್, ಅವಿನಾಶ್, ಕಾರ್ತಿಕ್ ಸುಂದರಂ, ಗಿರೀಶ್ ಬಿಜ್ಜಳ ಮುಂತಾದವರು ಚಿತ್ರದ ತಾರಾ ಬಳಗದಲ್ಲಿದ್ದಾರೆ.