ಭಾವೈಕ್ಯತೆ ಆಧ್ಯಾತ್ಮ ಜ್ಞಾನ ಭಾರತದ ಉಸಿರು :  ರಂಭಾಪುರಿ ಶ್ರೀ

ಸಂಜೆವಾಣಿ ವಾರ್ತೆ

ದಾವಣಗೆರೆ.ಆ.೧೦: ಭಾರತ ಧರ್ಮ ದರ್ಶನಗಳ ತವರೂರು. ಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು  ಶ್ರೀಮದಭಿನವ ರೇಣುಕ ಮಂದಿರ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಭವನದಲ್ಲಿ ಜರುಗಿದ ಜನ ಜಾಗೃತಿ ಧರ್ಮ ಸಮಾವೇಶದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಆಧುನಿಕ ಜಗದಲ್ಲಿ ಪ್ರಗತಿಪರ ವಿಚಾರ ಧಾರೆಗಳ ಹೆಸರಿನಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶವಾಗಬಾರದು. ಭಗವಂತನಿತ್ತ ಸಂಪತ್ತು ನಿಜವಾದ ಬಾಳಿನ ಅಮೂಲ್ಯ ಸಂಪತ್ತೆAಬುದನ್ನು ಅರಿಯಬೇಕು. ದೇವರ ಮೇಲಿನ ನಂಬಿಕೆ ಮನುಷ್ಯನ ಬಾಳಿಗೆ ಶಾಶ್ವತ ನಂದಾದೀಪ. ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ಸಾತ್ವಿಕ ಮತ್ತು ತಾತ್ವಿಕ ಚಿಂತನೆಗಳನ್ನು ಬೋಧಿಸುವುದರ ಮೂಲಕ ಸಮಾಜದಲ್ಲಿ ಸಾಮರಸ್ಯ ಸೌಹಾರ್ದತೆ ಬೆಳೆಸಿದ ಕೀರ್ತಿ ಗುರು ಪರಂಪರೆಗೆ ಸಲ್ಲುತ್ತದೆ. ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ಧರ್ಮ ಸೂತ್ರಗಳ ಮೂಲಕ ಜನಜಾಗೃತಿಗೈದ ಇತಿಹಾಸವನ್ನು ಅರಿಯಬೇಕಾಗಿದೆ. ಅತ್ಯಂತ ಪ್ರಾಚೀನ ಇತಿಹಾಸ ಮತ್ತು ಪರಂಪರೆ ಹೊಂದಿದ ವೀರಶೈವ ಧರ್ಮದ ಸಂರಕ್ಷಣೆ ಮತ್ತು ಪರಿಪಾಲನೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.ಸಮಾರಂಭ ಉದ್ಘಾಟಿಸಿದ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟಿçÃಯ ಉಪಾಧ್ಯಕ್ಷÀ ಅಥಣಿ ವೀರಣ್ಣನವರು ಮಾತನಾಡಿ ಧರ್ಮ ಮತ್ತು ಧರ್ಮಾಚರಣೆ ಮರೆತರೆ ಅಪಾಯ ತಪ್ಪಿದ್ದಲ್ಲ. ಧಾರ್ಮಿಕ ಬದುಕು ಸಮೃದ್ಧಗೊಂಡAತೆ ಆಂತರಿಕ ಜೀವನ ಪರಿಶುದ್ಧಗೊಳ್ಳಬೇಕಾಗಿದೆ. ಧಾರ್ಮಿಕ ಸಂಸ್ಕೃತಿಯ ಜೊತೆಗೆ ಸಾಮಾಜಿಕ ಸತ್ಕಾçಂತಿಗೈದ ಮೊದಲ ಧರ್ಮ ವೀರಶೈವ ಧರ್ಮವಾಗಿದೆ. ವೀರಶೈವ ಧರ್ಮದ ಎಲ್ಲ ಒಳ ಪಂಗಡಗಳು ಮೂಲ ತತ್ವ ಸಿದ್ಧಾಂತಗಳನ್ನು ಮರೆಯದೇ ಪರಿಪಾಲಿಸಿಕೊಂಡು ಬರುವ ಅಗತ್ಯ ಬಹಳಷ್ಟಿದೆ ಎಂದರು. ರಾಜನಹಳ್ಳಿ ರಮೇಶ ಬಾಬು ಅವರಿಗೆ ‘ಸಮಾಜ ಸೇವಾ ವಿಭೂಷಣ’ ಪ್ರಶಸ್ತಿಯಿತ್ತು ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಮಹಾಸಭೆಯ ಉಪಾಧ್ಯಕ್ಷ ಅಣಬೇರು ರಾಜಣ್ಣ ಮಾತನಾಡಿ ವೀರಶೈವ ಧರ್ಮದ ಆದರ್ಶತೆಯನ್ನು ಸ್ಮರಿಸಿದರು. ಕೊಟ್ಟೂರಿನ ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತವನ್ನಿತ್ತರು. ನೇತೃತ್ವ ವಹಿಸಿದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸುಖದ ಮೂಲ ಧರ್ಮಾಚರಣೆಯಲ್ಲಿದೆ. ಭೌತಿಕ ಸಂಪತ್ತಷ್ಟೇ ಮುಖ್ಯವಲ್ಲ ಅದರೊಂದಿಗೆ ಧರ್ಮ ಪ್ರಜ್ಞೆ ಸದಾಚಾರ ಅಳವಡಿಸಿಕೊಳ್ಳಬೇಕೆಂದರು. ಹಲವಾರು ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತ್ತು ಹರಸಿದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ ಜರುಗಿತು. ಜಯದೇವ ದೇವರಮನೆ ಸ್ವಾಗತಿಸಿದರು. ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ ಜಗದ್ಗುರುಗಳಿಗೆ ಗೌರವ ಮಾಲಾರ್ಪಣೆ ಮಾಡಿದರು. ಉಪನ್ಯಾಸಕ ವೀರಣ್ಣ ಬಿ.ಶೆಟ್ಟರ್ ನಿರೂಪಿಸಿದರು. ಹರಿಹರದ ಕಾಂತರಾಜ ಮತ್ತು ವೀರೇಶ ಬಡಿಗೇರ ಸಂಗೀತ ಸೇವೆ ಸಲ್ಲಿಸಿದರು.ಲೋಕಕಲ್ಯಾಣಾರ್ಥವಾಗಿ ಬೆಳಿಗ್ಗೆ ಶ್ರೀ ರಂಭಾಪುರಿ ಜಗದ್ಗುರುಗಳವರು ಅಧಿಕ ಶ್ರಾವಣ ಮಾಸದ ನಿಮಿತ್ಯ ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಭಕ್ತ ಸಂಕುಲಕ್ಕೆ ಶುಭ ಹಾರೈಸಿದರು. ಸಮಾರಂಭದ ನಂತರ ಅನ್ನ ದಾಸೋಹ ಜರುಗಿತು.