ಭಾಷಣ ವೇಳೆ ಸುಸ್ತಾಗಿ ಕುಸಿದ ಸಚಿವ ಹೆಚ್.ಸಿ.ಎಂ

ಸಂಜೆವಾಣಿ ನ್ಯೂಸ್
ಮೈಸೂರು: ಆ.16:- ಇಂದು ದೇಶಾದ್ಯಂತ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮವಾಗಿದ್ದು ಮೈಸೂರಿನಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಸುಸ್ತಾಗಿ ಕುಸಿದ ಘಟನೆ ನಡೆದಿದೆ.
ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯ ಸಮಾರಂಭ ಅದ್ದೂರಿಯಾಗಿ ನಡೆಯುತ್ತಿತ್ತು. ಈ ವೇಳೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾಷಣ ಮಾಡುತ್ತಿದ್ದರು. ಈ ವೇಳೆ ಬಿಸಿಲಿನ ಬಿಸಿಲಿಗೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸುಸ್ತಾದರು. ಸುದೀರ್ಘ ಭಾಷಣ ಓದಿ ಸುಸ್ತಾಗಿ ಕುಳಿತರು.
ನೀರು ಕುಡಿದು ಸ್ವಲ್ಪ ಹೊತ್ತು ಸುಧಾರಿಸಿಕೊಂಡ ನಂತರ ಸಚಿವ ಹೆಚ್.ಸಿ ಮಹದೇವಪ್ಪ ಅವರು ಮತ್ತೆ ಕಾರ್ಯಕ್ರಮದಲ್ಲಿ ಭಾಗಿಯಾದರು.
ನನ್ನ ಆರೋಗ್ಯ ಸ್ಥಿರ: ಭಯಪಡುವ ಅಗತ್ಯವಿಲ್ಲ
77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಸುಸ್ತಾಗಿ ಕುಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರ ಆರೋಗ್ಯ ಸ್ಥಿರವಾಗಿದೆ.
ಈ ಕುರಿತು ಸ್ವತಃ ಸಚಿವ ಹೆಚ್.ಸಿ ಮಹದೇವಪ್ಪ ಅವರೇ ಮಾಹಿತಿ ನೀಡಿದ್ದಾರೆ. ನನ್ನ ಆರೋಗ್ಯ ಸ್ಥಿರವಾಗಿದೆ. ಯಾರು ಕೂಡ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಸ್ವಾತಂತ್ಯ್ರ ದಿನಾಚರಣೆ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಕಣ್ಣು ಮಂಜಾಯಿತು.
ಬಿಸಿಲು ಹೆಚ್ಚಾಗಿದ್ದರಿಂದ ಆ ರೀತಿಯಾಗಿದೆ. ನೀರು ಕುಡಿದು ಸುಧಾರಿಸಿಕೊಂಡ ನಂತರ ಸರಿಯಾಯಿತು. ನನಗೆ ಬಿಪಿ ಶುಗರ್ ಇಲ್ಲ, ನನ್ನ ಆರೋಗ್ಯ ಸ್ಥಿರವಾಗಿದೆ. ತಪಾಸಣೆಗೆ ಒಳಗಾಗುವ ಅವಶ್ಯಕತೆ ಇಲ್ಲ. ಯಾರು ಕೂಡ ಆತಂಕ ಪಡಬೇಡಿ, ನಾನು ಚೆನ್ನಾಗಿದ್ದೇನೆ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದರು.
ಮೈಸೂರಿನ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 77 ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗಿದ್ದ ಉಸ್ತುವಾರಿ ಸಚಿವ ಎಚ್. ಸಿ ಮಹದೇವಪ್ಪ ಭಾಷಣ ಮಾಡುತ್ತಿದ್ದ ವೇಳೆ ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದರು.
ಬಿಸಿಲಿನ ಜಳಕ್ಕೆ ತಲೆಸುತ್ತಿ ಭಾಷಣವನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದರು. ಧ್ವಜಸ್ತಂಭದ ಬಳಿಯೇ ಕುರ್ಚಿಯಲ್ಲಿ ಕುಳಿತ ಸಚಿವರು. ನಂತರ ನೀರು ಕುಡಿದು ಸ್ವಲ್ಪ ಸುಧಾರಿಸಿಕೊಂಡ ಬಳೀಕ ಕಾರ್ಯಕ್ರಮದಲ್ಲಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಭಾಗಿಯಾಗಿದ್ದರು.