ಭೀಕರ ರಸ್ತೆ ಅಪಘಾತ:ಓರ್ವ ಸಾವು, ಇಬ್ಬರಿಗೆ ಗಾಯ

ಹುಮನಾಬಾದ್,ಜು.14-ತಾಲೂಕಿನ ಮಾಣಿಕನಗರ-ಕನಕಟ್ಟಾ ಗ್ರಾಮದ ರಸ್ತೆಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಓರ್ವ ಯುವಕ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ್ ಗ್ರಾಮದ ರೋಹಿತ್ ಮಾಣಿಕ್ (23) ಎಂಬ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಈತನ ಜೊತೆಗೆ ಇದ್ದ ಶಿವಕುಮಾರ್ ಹಾಗೂ ಶ್ರೀಕಾಂತ್ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಇವರ ಸ್ಥಿತಿ ಚಿಂತಾಜನಕವಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸಂಚಾರ ಪೆÇಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಸಂಭವಿಸಿದ ನಂತರ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಅಪರಿಚಿತ ವಾಹನವೊಂದು ಅತಿ ವೇಗದಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರಬುದು ಎಂದು ಶಂಕಿಸಿದ್ದಾರೆ.
ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.