ಭೀಕರ ರಸ್ತೆ ಅಪಘಾತ:ಮೂವರ ಸಾವು

ವಿಜಯಪುರ:ಮಾ.22: ಯರಗಲ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಮೂವರ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ – ಕಲಬುರಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಿಂದಗಿ ತಾಲೂಕಿನ ಯರಗಲ್ಲ ಬಿ.ಕೆ.ಗ್ರಾಮದ ಕಾಲುವೆ ಬಳಿ ಟ್ಯಾಂಕರ್ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಜೇವರ್ಗಿಯತ್ತ ಹೊರಟಿದ್ದ ಟ್ಯಾಂಕರ್ ಸಿಂದಗಿಯತ್ತ ಸಾಗುತ್ತಿದ್ದ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಬೈಕ್ ಮೇಲಿದ್ದ ಮೂವರು ಸವಾರರು ರಸ್ತೆಯಲ್ಲಿ ಚೆಲ್ಲಾಪಿಲ್ಲಿ ಯಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯ ಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾಗ೯ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ದ್ವಿಚಕ್ರ ವಾಹನ ಸವಾರರನ್ನು ದೇವರಹಿಪ್ಪರಗಿ ತಾಲೂಕಿನ ಬಿ.ಬಿ ಇಂಗಳಗಿ ಗ್ರಾಮದ ಮಹಾಂತೇಶ ಕಾಸಣ್ಣ ಹಡಪದ (27), ಸದ್ದಾಂ ಬಂದಗಿಸಾಬ ನಾಯ್ಕೋಡಿ (27), ಹಂಚಲಿ ಗ್ರಾಮದ ಮಂಜುನಾಥ ದೇವಪ್ಪ ದೊಡ್ಡಮನಿ (24) ಎಂದು ಗುರುತಿಸಲಾಗಿದೆ.
ಬೈಕ್ ಸವಾರರು ಅಮವಾಸ್ಶೆ ನಿಮಿತ್ಶ ಅಫಜಲಪೂರ ತಾಲೂಕಿನ ಘತ್ತರಗಿ ಶ್ರೀ ಭಾಗ್ಶವಂತಿದೇವಿ ದರ್ಶನ ಪಡೆದು ನಂತರ ಮರಳಿ ಸ್ವಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.‌