ಭೀಮರಾವ್ ಟಿ.ಟಿ ಗೆ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡುವಂತೆ ವಾಶಿಂ ಅಕ್ರಮ್ ಮನವಿ

ಕಲಬುರಗಿ:ಜೂ.2: ತಾಲೂಕಿನ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಭೀಮರಾವ್ ಟಿಟಿ ಕಳೆದ ಅನೇಕ ದಶಕಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ದುಡಿದು ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳು ನಿಭಾಯಿಸಿಕೊಂಡು ಬರುತ್ತಿದ್ದಾರೆ. ಹಾಗಾಗಿ ಬರುವ ವಿಧಾನಪರಿಷತ್ ಎಂಎಲ್ಸಿಗೆ ನಾಮ ನಿರ್ದೇಶನ ಮಾಡಬೇಕು ಎಂದು ಚಿಂಚೋಳಿ ತಾಲೂಕಿನ ವಿದ್ಯಾರ್ಥಿ ಒಕ್ಕೂಟದ ತಾಲೂಕ ಉಪಾಧ್ಯಕ್ಷರಾದ ವಾಶಿಂ ಅಕ್ರಮ್ ಗಾರಂಪಳ್ಳಿ ಹಾಗೂ ರುದ್ರಮುನಿ ದಂಡಿನ್ ಚಿಮ್ಮಾಇದಲ್ಲಾಯಿ ಇವರು ಕಾಂಗ್ರೆಸ್ ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿದ ಇವರು ಭೀಮರಾವ್ ಟಿಟಿ ಇವರು ಸುಮಾರು ವರ್ಷಗಳಿಂದ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ ಇವರು ಒಂದು ಸಾರಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸದಸ್ಯರಾಗಿ ಕಾರ್ಯನಿರ್ವಹಿಸಿ. ಬಡವರಿಗೆ ದೀನ ದಲಿತರಿಗೆ ಹಿಂದುಳಿದ ವರ್ಗದವರಿಗೆ ಅಲ್ಪಸಂಖ್ಯಾತರಿಗೆ ಬಹು ಸಂಖ್ಯಾತರಿಗೆ ಬಹುಜನರಿಗೆ ಎಲ್ಲಾ ಜಾತಿಯ ಜನಾಂಗದವರಿಗೆ ಸಾಮಾಜಿಕ ಆರ್ಥಿಕ ಶೈಕ್ಷಣಿಕವಾಗಿ ನ್ಯಾಯ ಕಲ್ಪಿಸಿಕೊಟ್ಟಿದ್ದಾರೆ.
ಇಂತಹ ಕ್ರಿಯಾಶೀಲ ಹಿರಿಯ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ವಿಧಾನ ಪರಿಷತ್ ನಾಮ ನಿರ್ದೇಶನ ಮಾಡಿದರೆ ಪಕ್ಷ ಸಂಘಟನೆ ಮಾಡುವಲ್ಲಿ ಇನ್ನಷ್ಟು ಶಕ್ತಿ ಬಲ ಬರುತ್ತದೆ ಬಡವರಿಗೆ ರೈತರಿಗೆ ಇನ್ನಷ್ಟು ಸೇವೆ ಮಾಡಲು ಅನುಕೂಲವಾಗುತ್ತದೆ ಹಾಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಶರಣ ಪ್ರಕಾಶ್ ಪಾಟೀಲ್ ಅವರಿಗೆ ಭೀಮರಾವ್ ಟಿಟಿ ಇವರಿಗೆ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.