ಭೀಮಾ ತೀರದ ರಕ್ತಸಿಕ್ತ ಇತಿಹಾಸಕ್ಕೆ ಅಂತ್ಯ ಹಾಡುವೆಃ ಐಜಿಪಿ ರಾಘವೇಂದ್ರ ಸುವಾಸ್

ವಿಜಯಪುರ, ನ.4-ಭೀಮಾ ತೀರದ ಮಹಾದೇವ ಭೈರಗೊಂಡ ಹಾಗೂ ಆತನ ಸಹಚರರ ಮೇಲೆ ಸೋಮವಾರ ನಡೆದ ಗುಂಡಿನ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಮಂಗಳವಾರ ವಿಜಯಪುರಕ್ಕೆ ಎಂಟ್ರಿ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.
ಸೋಮವಾರ ಸಂಜೆ ಮಹಾದೇವ ಭೈರಗೊಂಡ ಹಾಗೂ ಆತನ ಸಹಚರರ ಮೇಲೆ ನಡೆದ ಗುಂಡಿನ ದಾಳಿ ಸ್ಥಳ ಮಹಜರು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಭೈರಗೊಂಡ ಹತ್ಯೆಗೆ ನಡೆದ ಪೂರ್ವನಿಯೋಜಿತ ಸಂಚು ಇದಾಗಿದೆ. ಮೂರು ಗುಂಪುಗಳಲ್ಲಿ ಭೈರಗೊಂಡ ಮೇಲೆ ದಾಳಿ ನಡೆದಿದೆ ಎಂದರು. ಈ ವೇಳೆ ಭೈರಗೊಂಡ ಸಂಚರಿಸುತ್ತಿದ್ದ ಕಾರನ್ನು ಒಂದು ಗುಂಪು ಡಿಕ್ಕಿ ಹೊಡೆಸಿತ್ತು. ಇನ್ನೊಂದೆಡೆ ಪಕ್ಕದ ತೊಗರಿಯಲ್ಲಿ ಅವಿತುಕೊಂಡಿದ್ದ ಗುಂಪು ಕಾರು ಅಡ್ಡಗಟ್ಟಿತ್ತು. ಮತ್ತೊಂದು ಬೈಕ್ನಲ್ಲಿ ಬಂದ ಗಂಪು ಏಕಾಏಕಿ ಗುಂಡಿನ ದಾಳಿ ನಡೆಸಿತ್ತು.
ಪೆಟ್ರೋಲ್ ಬಾಂಬ್ ಪತ್ತೆಃ ಈ ಹಂತದಲ್ಲಿ ಪೆಟ್ರೋಲ್ ಬಾಂಬ್ ಸಹ ಎಸೆದಿದ್ದು ತನಿಖೆ ವೇಳೆ ಬಯಲಾಗಿದೆ. ಆದರೆ ಅದು ಸ್ಪೋಟಗೊಂಡಿಲ್ಲ. ಒಂದು ವೇಳೆ ಅದು ಸ್ಪೋಟವಾಗಿದ್ದರೆ, ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎಂದವರು ಘಟನೆಯ ವಿವರ ನೀಡಿದರು. ಘಟನಾ ಸ್ಥಳದಲ್ಲಿ ಮಚ್ಚು, ಲಾಂಗ್, ಪೆಟ್ರೋಲ್ ಬಾಂಬ್ಗಳು ಸಿಕ್ಕಿವೆ ಎಂದು ಐಜಿ ವಿವರಿಸಿದರು. ಅಲ್ಲದೇ ಘಟನೆ ನಡೆದ 1 ಕಿಮೀ ವ್ಯಾಪ್ತಿ ಪರಿಶೀಲಿಸಿದಾಗ, 5 ಬೈಕ್, 1 ಟಿಪ್ಪರ್ ಹಾಗೂ ನಾನಾ ಮಾರಕಾಸ್ತ್ರಗಳು ಸಿಕ್ಕಿವೆ. ಈ ಪ್ರಕರಣದ ಆರೋಪಿಗಳನ್ನು ಭೇದಿಸಲು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ವಿಜಯಪುರ-ಬಾಗಲಕೋಟೆ ಜಿಲ್ಲೆಯ 1500 ಪೊಲೀಸ್ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟೆಚ್ಚರ ವಹಿಸಿ, ಚುರುಕಿನಿಂದ ತನಿಖೆ ನಡೆಸುತ್ತಿದ್ದಾರೆ ಎಂದವರು ತಿಳಿಸಿದರು.
ದಾಳಿ ನಡೆಸಿರುವ ದುಷ್ಕರ್ಮಿಗಳ ಬಗ್ಗೆ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದರು. ಘಟನೆಯಲ್ಲಿ ಭೈರಗೊಂಡ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಪೈಕಿ ಕೆಲವರು ಗಾಯಗೊಂಡಿರುವುದು ತಿಳಿದು ಬಂದಿದೆ. ಹೀಗಾಗಿ ಗಾಯಾಳುಗಳು ವಿಜಯಪುರ, ಸೊಲ್ಲಾಪುರ, ಪುಣೆಯ ಹೆಸರಾಂತ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುವ ಸಾಧ್ಯತೆಯಿದೆ. ಹಾಗಾಗಿ ಆ ಆಸ್ಪತ್ರೆಗಳನ್ನು ಸಂಪರ್ಕಿಸಲಾಗಿದ್ದು, ಗುಂಡಿನ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಗಳು ಚಿಕಿತ್ಸೆಗೆ ದಾಖಲಾದರೆ, ಮಾಹಿತಿ ನೀಡುವಂತೆ ತಿಳಿಸಲಾಗಿದೆ ಎಂದವರು ತಿಳಿಸಿದರು.
ಇನ್ನು ವತ್ತಿಪರ ಕೊಲೆಗಾರರೇ ಈ ಕತ್ಯದಲ್ಲಿ ಭಾಗಿಯಾಗಿದ್ದು, ತನಿಖಾ ವೇಳೆ ಗೊತ್ತಾಗಿದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕವೇ ಇದು ಸುಪಾರಿ ಹತ್ಯೆಗೆ ಯತ್ನವೋ ಇಲ್ಲವೇ ಬೇರೆ ಉದ್ದೇಶದ್ದೋ ಎಂಬುದು ಶೀಘ್ರ ಬಹಿರಂಗಗೊಳಿಸುತ್ತೇವೆ. ಘಟನೆ ನಡೆದ ಬಳಿಕ ಸೋಮವಾರ ಸಂಜೆಯಿಂದ ಇಲ್ಲಿಯವರೆಗೆ ನಮ್ಮ ಸಿಬ್ಬಂದಿ 35 ಕಡೆ ದಾಳಿ ನಡೆಸಿದ್ದಾರೆ. ಇನ್ನೊಂದೆಡೆ ಭೈರಗೊಂಡ ಹಾಗೂ ಚಡಚಣ ಕುಟುಂಬಗಳ ದಶಕಗಳ ಹಳೆ ದಾಖಲೆಗಳನ್ನು ಕಲೆ ಹಾಕಲಾಗುತ್ತಿದೆ ಎಂದರು.
ಇನ್ನು ಘಟನೆಯಲ್ಲಿ ಒಂದು ಗುಂಡು ಹೊಕ್ಕಿದ್ದರಿಂದ ಗಂಭೀರ ಗಾಯಗೊಂಡಿದ್ದ ಭೈರಗೊಂಡ ಕಾರ ಚಾಲಕ ಲಕ್ಷ್ಮಣ ಖೇಗಾಂವ (ದಿಂಡೂರೆ) ಬೆಳಗ್ಗೆ ಮತಪಟ್ಟಿದ್ದಾನೆ. ಇದರಿಂದಾಗಿ ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ ಎಂದು ಐಜಿಪಿ ತಿಳಿಸಿದರು. ಗುಂಡಿನ ದಾಳಿ ವೇಳೆ ಈತನ ಹೊಟ್ಟೆಗೂ ಗುಂಡು ಹೊಕ್ಕಿತ್ತು. ಇದರಿಂದಾಗಿ ಆಂತರಿಕ ರಕ್ತಸ್ರಾವವಾಗಿ ಆತ ಸಾವನ್ನಪ್ಪಿದ್ದಾನೆ. ಇತ್ತ ಘಟನೆಯ ಕೇಂದ್ರ ಬಿಂದುವಾಗಿರುವ ಮಹಾದೇವ ಭೈರಗೊಂಡ ಚೇತರಿಸಿಕೊಳ್ಳುತ್ತಿದ್ದಾನೆ ಎಂದವರು ತಿಳಿಸಿದ್ದಾರೆ.
ಎಫ್‍ಎಸ್‍ಎಲ್ ತಂಡ ಭೇಟಿಃ ಇವರೊಟ್ಟಿಗೆ ಘಟನಾ ಸ್ಥಳಕ್ಕೆ ಬೆಳಗಾವಿಯ ವಿಧಿ-ವಿಜ್ಞಾನ ಕೇಂದ್ರ (ಎಫ್‍ಎಸ್‍ಎಲ್) ತಂಡವೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತಂಡದ ಮೂವರು ಸದಸ್ಯರು, ಘಟನೆಯನ್ನು ಸಂಪೂರ್ಣ ಮಹಜರು ಮಾಡಿದ್ದಾರೆ. ಸ್ಥಳದಲ್ಲೇ ಸಿಕ್ಕಂತ ಜೀವಂತ ಗುಂಡುಗಳು ಹಾಗೂ ಬೈಕ್ಗಳನ್ನು ಪರಿಶೀಲಿಸಿದರು. ಈ ತಂಡಕ್ಕೆ ಎಸ್ಪಿ ಅನುಪಮ್ ಅಗರವಾಲ ಸಾಥ್ ನೀಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ರಕ್ತಪಾತದ ಕಹಳೆ ಮೊಳಗಿದೆ. ನಿನ್ನೆ ಮಹಾದೇವ ಸಾಹುಕಾರ್ ಭೈರಗೊಂಡ ಹಾಗೂ ಸಹಚರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಐಜಿ ರಾಘವೇಂದ್ರ, ಈ ತನಿಖೆ ನೆನಪಿನಲ್ಲಿ ಉಳಿಯಲಿದೆ ಎಂದು ಹೇಳಿದ್ದಾರೆ.
ಶೂಟೌಟ್ ನಡೆದಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಐಜಿ, ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ದಾಳಿ ನಡೆಸಿದವರ ಗುರುತು ಪತ್ತೆಯಾಗಿದ್ದು, ಅತೀ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ. ಘಟನೆ ಸಂದರ್ಭದಲ್ಲಿ 15 ರಿಂದ 20 ಜನ ಗುಂಡಿನ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇದ್ದು, ದಾಳಿ ಮಾಡಿದವರ ಕಡೆಯಲ್ಲೂ ಇಬ್ಬರಿಗೆ ಗಾಯಗಳಾಗಿವೆ ಎಂಬುದಾಗಿ ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ಮಾಹಿತಿ ಅನ್ವಯ ಆರೋಪಿಗಳು, 23 ರಿಂದ 30 ವರ್ಷದೊಳಗಿನ ವ್ಯಕ್ತಿಗಳಾಗಿದ್ದಾರೆ. ಘಟನಾ ಸ್ಥಳದಲ್ಲಿ 6 ರಿಂದ 7 ವೆಪನ್ ಗಳ ಗುಂಡುಗಳು ಪತ್ತೆಯಾಗಿದೆ. ಸದ್ಯ ಆರೋಪಿಗಳು ಗಾಯಗೊಂಡಿರುವ ಕಾರಣ ವಿಜಯಪುರ, ಮಹಾರಾಷ್ಟ್ರದ ಸೋಲಾಪುರ, ಪುಣೆಗಳಲ್ಲಿ ಆಸ್ಪತ್ರೆಗಳಿಗೆ ಗಾಯಾಳುಗಳ ಮಾಹಿತಿ ಕೇಳಿದ್ದೇವೆ. ನಿನ್ನೆ ಸಂಜೆಯಿಂದ 35 ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 37 ಜನ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸರು ವಿಜಯಪುರ ಸೇರಿ ನಾನಾ ಗಸ್ತು ನಡೆಸಿದ್ದಾರೆ. ಈ ದಾಳಿಯಲ್ಲಿ ಪಾಲ್ಗೊಂಡ ಎಲ್ಲರನ್ನು ಶೀಘ್ರವೇ ಬಂಧಿಸುತ್ತೇವೆ. ಘಟನಾ ಸ್ಥಳದಲ್ಲಿ ಮಚ್ಚು, ಲಾಂಗ್, ಪೆಟ್ರೋಲ್ ಬಾಂಬ್ ಸೇರಿದಂತೆ 5 ಮೋಟಾರ್ ಸೈಕಲ್, ಟ್ರಕ್ ಅನ್ನು ವಶಕ್ಕೆ ಪಡೆದಿದ್ದೇವೆ ಎಂದರು.
ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳಲ್ಲಿ ಕೆಲ ಸ್ಥಳೀಯರ ಮಾಹಿತಿ ಲಭಿಸಿದೆ. ಅಲ್ಲದೇ ಪುಣೆ, ಉತ್ತರ ಪ್ರದೇಶದ ಜನರೂ ಭಾಗಿಯಾಗಿರುವ ಸಾಧ್ಯತೆಯಿದೆ. ಘಟನೆ ನಡೆದಿರುವುದನ್ನು ಗಮನಿಸಿದರೆ ಪಕ್ಕಾ ಪ್ಲಾನ್ ಮಾಡಿ ದಾಳಿ ಮಾಡಿದ್ದಾರೆ. ಈ ಪ್ರರಕಣದ ತನಿಖೆ ಜನರ ನೆನಪಿನಲ್ಲಿ ಉಳಿಯುತ್ತದೆ. ವಿಜಯಪುರ, ಕಲಬುರಗಿಯಲ್ಲಿ ಸಕ್ರಿಯವಾಗಿರುವ ಗ್ಯಾಂಗ್ಗಳನ್ನು ಮಟ್ಟ ಹಾಕುತ್ತೇವೆ ಎಂದರು.
ವಿಜಯಪುರ ಭೀಮಾ ತೀರದಲ್ಲಿನ ಅಪರಾಧ ಕೃತ್ಯಗಳಿಗೆ ತಾತ್ವಿಕ ಅಂತ್ಯ ಹಾಡುವುದಾಗಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುವಾಸ್ ಹೇಳಿದ್ದಾರೆ. ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಘಟನೆ ನಡೆದ ರಾಷ್ಟ್ರೀಯ ಹೆದ್ದಾರಿ ಕನ್ನಾಳ ಕ್ರಾಸ್ ಬಳಿ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಜಯಪುರ ಮತ್ತು ಸೋಲಾಪುರದ ರೌಡಿಗಳ ಪತ್ತೆಗೆ ತಯಾರಿ ನಡೆಸಲಾಗಿದೆ. ಇದೊಂದು ವ್ಯವಸ್ಥಿತ ಸಂಚಾಗಿದ್ದು, ವೃತ್ತಿಪರ ಕೊಲೆಗಾರರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸ ಲಾಗಿದ್ದು, ಮಹಾದೇವ ಸಾಹುಕಾರ ಭೈರಗೊಂಡ ಹತ್ಯೆ ಯತ್ನದ ಹಿಂದೆ ಯಾರಿದ್ದಾರೆ ಎನ್ನುವುದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಇದು ಸುಪಾರಿ ಹತ್ಯೆಗೆ ಯತ್ನವೋ ಅಥವಾ ಬೇರೆ ಉದ್ದೇಶವೋ ಎನ್ನುವುದು ಶೀಘ್ರ ಬಹಿರಂಗವಾಗಲಿದೆ ಎಂದು ಐಜಿಪಿ ತಿಳಿಸಿದರು.