ಭುವನೇಶ್ವರಿಗೆ ಪುಷ್ಪ ನಮನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ದಾವಣಗೆರೆ ನಗರಪಾಲಿಕೆ ಕಚೇರಿ ಆವರಣದಲ್ಲಿ ಕನ್ನಡತಾಯಿ ಭುವನೇಶ್ವರಿ ದೇವಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಗರಪಾಲಿಕೆ ಮಹಾಪೌರರಾದ ಅಜಯಕುಮಾರ್, ಉಪಮೇಯರ್ ಸೌಮ್ಯ, ಆಯುಕ್ತ ವಿಶ್ವನಾಥ ಮುದಜ್ಜಿ,ಸದಸ್ಯರಾದ ಶಿವನಗೌಡ ಪಾಟೀಲ್,ಕೆ.ಚಮನ್ ಸಾಬ್,ಹೆಚ್.ಸಿ ಜಯ,ಕನ್ನಡಪರ ಸಂಘಟನೆಗಳ ಮುಖಂಡರಾದ ಕೆ.ಜಿ ಯಲ್ಲಪ್ಪ ಸೇರಿದಂತೆ ವಿವಿಧ ಅಧಿಕಾರಿಗಳು, ಗಣ್ಯರು ಭಾಗವಹಿಸಿದ್ದರು. ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡು ತಮ್ಮ ಕಲೆಯನ್ನು ಪ್ರದರ್ಶಿಸುವ ಮೂಲಕ ನಗರಪಾಲಿಕೆ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಿಸಿದರು.