ಭೂಗತ ಪಾತಕಿ ರವಿ ಪೂಜಾರಿ 7 ದಿನ ಮುಂಬೈ ಪೊಲೀಸರ ವಶಕ್ಕೆ

ಮುಂಬೈ, ಫೆ.23- ಭೂಗತ ಪಾತಕಿ ರವಿ ಪೂಜಾರಿಯನ್ನು‌ ಏಳು ದಿನಗಳ ಕಾಲ ಮುಂಬೈ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.‌ 2016 ರಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಮುಂಬೈ ಪೊಲೀಸರ ವಶಕ್ಕೆ ನೀಡಲಾಗಿದೆ.
ನಿನ್ನೆ ಯಷ್ಟೇ ಬೆಂಗಳೂರಿನಿಂದ ಮುಂಬೈಗೆ ಕರೆದೊಯ್ದು ರವಿ ಪೂಜಾರಿಯನ್ನು ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ, ಮಾರ್ಚ್ 9ರವರೆಗೆ ಮುಂಬೈ ಪೊಲೀಸರ ವಶಕ್ಕೆ ರವಿ ಪೂಜಾರಿಯನ್ನು ಒಪ್ಪಿಸಿತು.
ಹಲವು ವರ್ಷಗಳ ವಿದೇಶದಲ್ಲೇ‌ ಅವಿತುಕೊಂಡಿದ್ದ ಪೂಜಾರಿಯನ್ನು ಕಳೆದ ವರ್ಷ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಕರೆ ತರಲಾಗಿತ್ತು. ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.
2016 ವಿರ್ಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಶಕ್ಕೆ ನೀಡಬೇಕೆಂದು ಮುಂಬೈ ಪೊಲೀಸರು ಕರ್ನಾಟಕದ ‌ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರವಿ ಪೂಜಾರಿಯನ್ನು ಮುಂಬೈ ಪೊಲೀಸರ ವಶಕ್ಜೆ ನ್ಯಾಯಾಲಯ ಒಪ್ಪಿಸಿದೆ.